ಬೆಳಗಾವಿಯಲ್ಲಿ ಪೈಶಾಚಿಕ ಕೃತ್ಯ ; 7 ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ

ಬೆಳಗಾವಿ : ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬೆಳಗಾವಿಯ ಮುರಗೋಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ನವೆಂಬರ್ 23 ರಂದು ಬಾಲಕಿ ತನ್ನ ಮನೆಯಿಂದ ಹಿಟ್ಟಿನ ಗಿರಣಿಗೆ ತೆರಳುತ್ತಿದ್ದಳು. ಈ ವೇಳೆ ಇಬ್ಬರು ಆರೋಪಿತರು ಸಂತ್ರಸ್ತ ಬಾಲಕಿಯನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ನೊಂದ ಬಾಲಕಿ ಪೋಷಕರ ಮುಂದೆ ವಿಷಯ ಹೇಳಿದಾಗ ಘಟನೆ ಬೆಳಕಿಗೆ ಬಂದಿದ್ದು ಪ್ರಕರಣ ದಾಖಲಾಗಿದೆ.
ಕೃತ್ಯ ಎಸಗಿರುವ ಆರೋಪದ ಮೇಲೆ ಮಣಿಕಂಠ ದಿನ್ನಿಮನಿ ಹಾಗೂ ಈರಣ್ಣ ಸಂಕಮ್ಮನವರ್ ಎಂಬುವವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಆರೋಪಿಗಳು ಜೀವ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದ್ದು ಈ ಕುರಿತು ಫೋಕ್ಸೋ ಪ್ರಕರಣ ದಾಖಲಾಗಿದೆ.
ಘಟನೆ ಕುರಿತು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಪ್ರತಿಕ್ರಿಯೆ ನೀಡಿದ್ದು. ಸಂತ್ರಸ್ತ ಬಾಲಕಿ ಪೋಷಕರು ನೀಡಿರುವ ದೂರು ಆಧರಿಸಿ ಈಗಾಗಲೇ ಆರೋಪಿಗಳನ್ನು ಬಂಧಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸಂತ್ರಸ್ತ ಬಾಲಕಿ ಬೆಂಬಲಕ್ಕೆ ಮಹಿಳಾ ಪೊಲೀಸ್ ಸಿಬ್ಬಂದಿ ನೇಮಿಸಿದ್ದು ಅವಶ್ಯಕೆ ಇದ್ದರೆ ಇವರ ಕುಟುಂಬಕ್ಕೆ ಸೂಕ್ತ ಭದ್ರತೆ ಒದಗಿಸಲಾಗುತ್ತದೆ ಎಂದರು.

