ದಾಸೋಹರತ್ನ ಬಂಡಿಗಣಿ ಸ್ವಾಮೀಜಿ ಲಿಂಗೈಕ್ಯ…!
ಬಾಗಲಕೋಟೆ : ದಾಸೋಹದ ಮೂಲಕವೇ ಉತ್ತರ ಕರ್ನಾಟಕ ಭಾಗದ ಮನೆಮಾತಾಗಿದ್ದ ಜಮಖಂಡಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾನಿಕ ಮಠದ ದಾನೇಶ್ವರ ಸ್ವಾಮೀಜಿ ನಿಧನರಾಗಿದ್ದಾರೆ.
ಅನಾರೋಗ್ಯ ಹಿನ್ನಲೆಯಲ್ಲಿ ಶ್ರಿಕಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಲಿಂಗೈಕ್ಯರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ ಕೆಲ ದಿನಗಳ ಹಿಂದೆಯಷ್ಟೇ ಬಂಡಿಗಣಿ ಮಠದಲ್ಲಿ ವಿಶ್ವಶಾಂತಿಗಾಗಿ ಸರ್ವ ಧರ್ಮ ಮಹಾಸಂಗಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ ಆಗಮಿಸಿ ಶ್ರೀಗಳ ಆಶಿರ್ವಾದ ಪಡೆದುಕೊಂಡಿದ್ದರು.

