ಟ್ರ್ಯಾಕ್ಟರ್ ಗೆ ಸಿಲುಕಿ ಸಾವಳಗಿ ರೈತ ಸಾವು
ಬೆಳಗಾವಿ : ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಮೃತಪಟ್ಟಿರುವ ಘಟನೆ ಜಿಲ್ಲೆಯ ಗೋಕಾಕ ತಾಲೂಕಿನ ಸಾವಳಗಿ ಗ್ರಾಮದಲ್ಲಿ ನಡೆದಿದೆ.
ಮೃತ ರೈತ ಚಂದ್ರಯ್ಯಾ ಬಸಲಿಂಗಯ್ಯಾ ಮಠಪತಿ ( 65) ಎಂದು ಗುರುತಿಸಲಾಗಿದೆ. ಟ್ರ್ಯಾಕ್ಟರ್ ಮೂಲಕ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರೈತನು ಚಕ್ರದ ಕೆಳಗೆ ಸಿಲುಕಿದ್ದಾನೆ.
ಘಟನೆಯಿಂದ ರೈತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸಾಗಿಸಲು ಯತ್ನಿಸಿದರೂ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾನೆ.
ಘಟನೆ ನಡೆದ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರ್ಯಾಕ್ಟರ್ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.


