ವರ್ಷದ ಕೊನೆಯಲ್ಲಿ ವಿನಯ್ ಕುಲಕರ್ಣಿಗೆ ಕೋರ್ಟ್ ಶಾಕ್
ಬೆಂಗಳೂರು : ಜಿಲ್ಲಾ ಪಂಚಾಯತಿ ಸದಸ್ಯ ಯೋಗೇಶ್ ಗೌಡ ( Yogish Gowda ) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ವಿನಯ್ ಕುಲಕರ್ಣಿ ( Vinay Kulakarni ) ಅವರಿಗೆ ವರ್ಷದ ಕೊನೆಯಲ್ಲಿ ಸಂಕಷ್ಟ ತಪ್ಪಿಲ್ಲ.
ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ವಿನಯ್ ಕುಲಕರ್ಣಿ ಪ್ರಕರಣದ ವಿಚಾರಣೆಯನ್ನು 2026 ರ ಜನವರಿ 5 ಕ್ಕೆ ಮುಂದೂಡುವ ಮೂಲಕ ವರ್ಷದ ಕೊನೆಯಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ಕುಲಕರ್ಣಿಗೆ ಕೋರ್ಟ್ ಶಾಕ್ ನೀಡಿದೆ.
ಸಧ್ಯ ವಿನಯ್ ಕುಲಕರ್ಣಿ ಪರವಾಗಿ ಹಿರಿಯ ವಕೀಲ ಸಿ.ವಿ ನಾಗೇಶ್ ( C V Nagesh ) ಅವರು ವಾದ ಮಾಡುತ್ತಿದ್ದಾರೆ. ಈ ಹಿಂದೆ ಜಾಮೀನು ಕೋರಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹೋಗಿದ್ದರು. ಆದರೆ ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಸಿಕ್ಕಿರಲಿಲ್ಲ.


