ಅಥಣಿ ಡಿಸಿಸಿ ನೌಕರನ ಮೇಲೆ ಹಲ್ಲೆ ; ಜೊಲ್ಲೆ ನೇತೃತ್ವದಲ್ಲಿ ಮಹತ್ವದ ಸಭೆ, ನಾಳೆ ಬೃಹತ್ ಪ್ರತಿಭಟನೆ ಸಾಧ್ಯತೆ..!
ಬೆಳಗಾವಿ : ಅಥಣಿ ಶಾಸಕ ಲಕ್ಷ್ಮಣ ಸವದಿ ಮನೆಯಲ್ಲಿ ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೆಬ್ ಜೊಲ್ಲೆ ನೇತೃತ್ವದಲ್ಲಿ ಸಭೆ ನಡೆಸಲಾಗುತ್ತಿದೆ.
ನಗರದ ಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ಮಹತ್ವದ ಸಭೆ ನಡೆದಿದ್ದು ನಿರ್ದೇಶಕರಾದ ಚನ್ನರಾಜ ಹಟ್ಟಿಹೊಳಿ, ಅರವಿಂದ ಪಾಟೀಲ ಸೇರಿದಂತೆ ಹಲವಾರು ನಿರ್ದೇಶಕರು ಭಾಗವಹಿಸಿದ್ದಾರೆ.
ನೌಕರನ ಮೇಲಿನ ಹಲ್ಲೆ ಖಂಡಿಸಿ ಸೋಮವಾರ ಬೆಳಗಾವಿ ಡಿಸಿಸಿ ಬ್ಯಾಂಕ್ ಬಂದ್ ಮಾಡಿ ನೌಕರರು ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಕುರಿತು ನಡೆಯುತ್ತಿರುವ ಸಭೆ ಮಹತ್ವ ಪಡೆದಿದೆ.


