Select Page

Advertisement

ಸಂಧಾನ ವಿಫಲ ; ಸೋಮವಾರ ಜಿಲ್ಲೆಯಾದ್ಯಂತ ಬ್ಯಾಂಕ್ ಬಂದ್..!

ಸಂಧಾನ ವಿಫಲ ; ಸೋಮವಾರ ಜಿಲ್ಲೆಯಾದ್ಯಂತ ಬ್ಯಾಂಕ್ ಬಂದ್..!

ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷನ ಮೇಲೆ ಹಲ್ಲೆ ವಿಚಾರವಾಗಿ ನೌಕರರ ಜೊತೆ ಅಧ್ಯಕ್ಷ ಅಣ್ಣಾಸಾಹೆಬ್ ಜೊಲ್ಲೆ ಹಾಗೂ ನಿರ್ದೇಶಕರು ನಡೆಸಿದ ಸಭೆ ವಿಫಲವಾಗಿದೆ.

ಭಾನುವಾರ ನಗರದ ಬಿಡಿಸಿಸಿ ಬ್ಯಾಂಕ್ ಕೇಂದ್ರ ಕಚೇರಿಯಲ್ಲಿ ನೌಕರರ ಜೊತೆ ನಡೆದ ಸಂಧಾನ ಸಭೆ ವಿಫಲವಾಗಿದ್ದು ಸೋಮವಾರ ಡಿಸಿಸಿ ಬ್ಯಾಂಕ್‌ನ ಜಿಲ್ಲೆಯ ಎಲ್ಲಾ ಶಾಖೆಗಳಲ್ಲಿ ನೌಕರರೆಲ್ಲ ಸೇವೆಗೆ ಗೈರಾಗುತ್ತೇವೆ. ಬ್ಯಾಂಕಿನ ಬೆಳಗಾವಿ ಪ್ರಧಾನ ಕಚೇರಿಯಲ್ಲಿ ಎಲ್ಲರೂ ಸಮಾವೇಶಗೊಳ್ಳುತ್ತೇವೆ. ಅಲ್ಲಿ ಧರಣಿ ಮಾಡುತ್ತೇವೆ. ಬೇಡಿಕೆ ಈಡೇರುವವರೆಗೂ ಹೋರಾಟದಿಂದ ಹಿಂದಕ್ಕೆ ಸರಿಯಲ್ಲ ಎಂದು ಸಂಘದ ಉಪಾಧ್ಯಕ್ಷ ಆನಂದ ಪಾಟೀಲ ತಿಳಿಸಿದರು.

ಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗಪ್ಪ ಕರೆಣ್ಣವರ ಮೇಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಬೇಕು, ಹಾಗೆಯೇ ಹಲ್ಲೆ ಮಾಡಿದವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು.‌ ನ್ಯಾಯ ಸಿಗುವವರೆಗೆ ಹೋರಾಟ ಮುಂದುವರೆಸುತ್ತೇವೆ ಎಂದರು.

ಸಭೆಯಲ್ಲಿ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ, ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ, ಅಪ್ಪಾಸಾಹೇಬ ಕುಲಗೂಡೆ, ಅರವಿಂದ ಪಾಟೀಲ, ವಿರೂಪಾಕ್ಷ ಮಾಮನಿ, ನಾನಾಸಾಹೇಬ ಪಾಟೀಲ ಭಾಗವಹಿಸಿದ್ದರು.

Advertisement

Leave a reply

Your email address will not be published. Required fields are marked *

error: Content is protected !!