Select Page

Advertisement

BREAKING : ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ FIR ದಾಖಲು

BREAKING : ಶಾಸಕ ಲಕ್ಷ್ಮಣ ಸವದಿ ಹಾಗೂ ಪುತ್ರನ ವಿರುದ್ಧ FIR ದಾಖಲು

ಬೆಳಗಾವಿ : ಬಿಡಿಸಿಸಿ ಬ್ಯಾಂಕ್ ನೌಕರನ ಮೇಲೆ ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ವಿರುದ್ಧ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ ಬಿಡಿಸಿಸಿ ಬ್ಯಾಂಕ್ ನೌಕರರ ಸಂಘದ ಅಧ್ಯಕ್ಷ ನಿಂಗರಾಜ ಕರೆಣ್ಣವರ ಅವರು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸಧ್ಯ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಲಕ್ಷ್ಮಣ ಸವದಿ, ಚಿದಾನಂದ ಸವದಿ ಹಾಗೂ ಬೆಂಬಲಿಗರ ವಿರುದ್ಧ ಪ್ರಕರಣ ದಾಖಲಾಗಿದೆ.

ಶಾಸಕ ಲಕ್ಷ್ಮಣ ಸವದಿ ಅವರ ಮನೆಗೆ ನಾಲ್ಕು ಜನರ ಸೇರಿ ನಾವು ಹೋಗಿದ್ದೇವು ಈ ಸಂದರ್ಭದಲ್ಲಿ ಶಾಸಕರು ನನಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಕಪಾಳಕ್ಕೆ ಹೊಡೆದಿದ್ದಾರೆ. ನಂತರ ಶಾಸಕರ ಪುತ್ರ ಚಿದಾನಂದ ಸವದಿ ಸೊಂಟಕ್ಕೆ ಒದ್ದು ಹಲ್ಲೆ ಮಾಡಿದ್ದಾರೆ.

ಇದಾದ ನಂತರ ಶಾಸಕ ಸವದಿ ಬೆಂಬಲಿಗರು ಕೂಡಿಕೊಂಡು ‌ನನ್ನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ ಎಂದು ಪ್ರಕರಣದಲ್ಲಿ ಉಲ್ಲೇಖಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!