Select Page

Advertisement

ಎಲ್ಲರೂ ಗೆಲ್ಲುವುದಕ್ಕೆ ಬರುವುದು ; ಸಚಿವ ಸತೀಶ್ ಟಾಂಗ್..!

ಎಲ್ಲರೂ ಗೆಲ್ಲುವುದಕ್ಕೆ ಬರುವುದು ; ಸಚಿವ ಸತೀಶ್ ಟಾಂಗ್..!



ಬೆಳಗಾವಿ : 2028 ರ ಚುನಾವಣೆ ಯುದ್ಧದಲ್ಲಿ ಸೋಲಿಸುತ್ತೇವೆ ಎಂಬ ರಮೇಶ್ ಕತ್ತಿ ಮಾತಿಗೆ ಪ್ರತಿಕ್ರಿಯೆ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಎಲ್ಲರೂ ಗೆಲ್ಲಲು ಬರುವುದೇ ಹೊರತು ಸೋಲಲು ಅಲ್ಲ. ನಮ್ಮ ಹೋರಾಟವನ್ನು ಬಹಿರಂಗವಾಗಿ ಹೇಳುವುದಿಲ್ಲ ಎಂದು ವಿರೋಧಿಗಳಿಗೆ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ನೀಡಿದರು.

ಬರುವ ಪೆಬ್ರವರಿ 1 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡುತ್ತಾರೆ. ಮುಂದಿನ ಅವಧಿಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿ ಎಂಬುದು ನಮ್ಮ ಆಶಯ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಹುಕ್ಕೇರಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಸಿದ್ದರಾಮಯ್ಯ ಅವರು ಐದು ವರ್ಷ ಮುಖ್ಯಮಂತ್ರಿಯಾಗಿ ಇರ್ತಾರೆ ಅಂತ ಭಾವಿಸಿದ್ದೇವೆ. ಈಗಾಗಲೇ ಎರಡೂವರೆ ವರ್ಷ ಮುಗಿಸಿದ್ದಾರೆ. ಸಿಎಂ ಆಗಿ ಪೂರ್ಣಾವಧಿ ಮುಗಿಸುವ ವಿಶ್ವಾಸವಿದೆ ಎಂದು ಸ್ವತಃ ಅವರೇ ಹೇಳಿದ್ದಾರೆ ಎಂದರು.

ದೇವರಾಜ ಅರಸು ಅವರ ಸುದೀರ್ಘ ಸೇವೆಯ ನಂತರ ಸಿಎಂ ಸಿದ್ದರಾಮಯ್ಯ ಸೇವೆ ಮುಂದುವರಿಸಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ, ನಮಗೆ ಇದೊಂದು ಹೆಮ್ಮೆಯ ವಿಷಯವಾಗಿದೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಿದ್ದರಾಮಯ್ಯ ಸಾಕಷ್ಟು ಶ್ರಮಪಟ್ಟಿದ್ದಾರೆ, ಹೋರಾಟ ಮಾಡಿದ್ದಾರೆ. ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಿದ್ದರಾಮಯ್ಯ ಬದಲಾವಣೆ ಕುರಿತ ಮಾಜಿ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ವಿಚಾರವಾಗಿ ಮಾತನಾಡಿ, ಸಮಯ ಬಂದಾಗ ಚರ್ಚೆ ಮಾಡೋಣ ಸದ್ಯ ಮುಖ್ಯಮಂತ್ರಿ ಬದಲಾವಣೆ ಸಂದರ್ಭ ಬಂದಿಲ್ಲ. ಅವರೇ ಮುಂದುವರಿಯುತ್ತಾರೆ ಎಂದರು. ಬಳ್ಳಾರಿ ಗಲಾಟೆ ವಿಚಾರವಾಗಿ ಮಾತನಾಡಿ, ಈಗಾಗಲೇ ತನಿಖೆ ನಡೆಯುತ್ತಿದೆ. ಎರಡೂ ಕಡೆಯವರ ಬಂಧನ ಆಗಿದೆ, ಸರಿಯಾಗಿ ತನಿಖೆ ನಡೆಯುತ್ತಿದೆ ಎಂದರು.

ಡಿಸಿಸಿ ಬ್ಯಾಂಕ್ ಗಲಾಟೆ, ಕರೆಣ್ಣವರ ಮೇಲೆ ಹಲ್ಲೆ ವಿಚಾರವಾಗಿ ಮಾತನಾಡಿ, ತನಿಖೆ ನಡೆಯುತ್ತಿದೆ. ಪೊಲೀಸರ ತನಿಖೆಯಿಂದ ಸತ್ಯಾಸತ್ಯತೆ ಹೊರ ಬರಲಿದೆ ಎಂದು ಹೇಳಿದರು.



Advertisement

Leave a reply

Your email address will not be published. Required fields are marked *

error: Content is protected !!