ಬೆಳಗಾವಿಯ ಇಬ್ಬರು ಪತ್ರಕರ್ತರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ
ಬೆಳಗಾವಿ : ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಹಾಗೂ ದತ್ತಿ ಪ್ರಶಸ್ತಿಗೆ ಬೆಳಗಾವಿಯ ಇಬ್ಬರು ಪತ್ರಕರ್ತರು ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ದಿನಪತ್ರಿಕೆಯ ಬೆಳಗಾವಿ ಜಿಲ್ಲಾ ಹಿರಿಯ ವರದಿಗಾರ ಸಂತೋಷ ಚಿನಗುಡಿ ಅವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಮೈಸೂರು ದಿಗಂತ ದತ್ತಿ ಪ್ರಶಸ್ತಿ ಲಭಿಸಿದೆ.
ಸಂಯುಕ್ತ ಕರ್ನಾಟಕ ಪತ್ರಿಕೆಯ ಚಿಕ್ಕೋಡಿ ವರದಿಗಾರ ಸಂಜೀವ ಕಾಂಬಳೆ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ವಾರ್ಷಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಒಟ್ಟು 40 ಪತ್ರಕರ್ತರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ನೀಡಿ ಗೌರವಿಸಲಿದೆ.


