Select Page

Advertisement

ಸಾಹಿತಿ ಆಶಾ ರಘು ವಿಧಿವಶ

ಸಾಹಿತಿ ಆಶಾ ರಘು ವಿಧಿವಶ




ಬೆಂಗಳೂರು : ಪ್ರಕಾಶಕಿ, ಸಾಹಿತಿ ಆಶಾ ರಘು (47) Asha Raghu ಮಲ್ಲೇಶ್ವರದ 9 ನೇ ಕ್ರಾಸ್ ನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಆಶಾ ಅವರ ಪತಿ, ಆಹಾರ ತಜ್ಞ ಕೆ.ಸಿ ರಘು ಅನಾರೋಗ್ಯದಿಂದ ಮೃತಪಟ್ಟಿದ್ದರು. ಪತಿಯ ಸಾವಿನ ನೋವಿನಲ್ಲಿದ್ದ ಆಶಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ. ಮೃತರಿಗೆ ಓರ್ವ ಪುತ್ರಿ ಇದ್ದಾರೆ.

ಆಶಾ ರಘು ಅವರು ಕನ್ನಡದ ಪ್ರಮುಖ ಕಾದಂಬರಿಗಾರ್ತಿಯಾಗಿ ಗುರುತಿಸಿಕೊಂಡಿದ್ದಾರೆ. ‘ಆವರ್ತ’, ಪೂತನಿ, ಗತ, ಮಾಯೆ, ಚಿತ್ತರಂಗ ಕಾದಂಬರಿಗಳನ್ನು ಬರೆದಿದ್ದರು.

ರಂಗಭೂಮಿ, ಕಿರುತೆರೆ, ಬೆಳ್ಳಿತೆರೆಯಲ್ಲಿ ಕಲಾವಿದೆಯಾಗಿ ನಟಿಸಿದ್ದಾರೆ, ಸಂಭಾಷಣೆ ಬರೆದಿದ್ದಾರೆ, ಸಹಾಯಕ ನಿರ್ದೇಶಕರಾಗಿಯೂ ಕೂಡ ಕೆಲಸ ಮಾಡಿದ್ದಾರೆ.

ಇವರ ಬರಹಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಸೂರ್ಯನಾರಾಯಣ ಚಡಗ ಪ್ರಶಸ್ತಿ, ತ್ರಿವೇಣಿ ದತ್ತಿನಿಧಿ ಪ್ರಶಸ್ತಿಗಳು ಬಂದಿವೆ. ಇನ್ನು ಮಂಡ್ಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು 2023 ರಲ್ಲಿ ‘ಸಾಹಿತ್ಯಾಮೃತ ಸರಸ್ವತಿ’ ಎಂಬ ಬಿರುದು ಕೂಡ ಸಿಕ್ಕಿದೆ.

Advertisement

Leave a reply

Your email address will not be published. Required fields are marked *

error: Content is protected !!