ಬೆಳಗಾವಿ : ಮನೆಯಲ್ಲಿ 134 ಗ್ರಾಂ ಗಾಂಜಾ ಇಟ್ಟುಕೊಂಡಿದ್ದ ಆರೋಪಿಯನ್ನು ಮಾಳಮಾರುತಿ ಪೊಲೀಸರು ಬಂಧಿಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ಹೇಳಿದರು.

ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಹುಲ್ ಬಂಟಿ ಬಂಧಿತ ಆರೋಪಿ. 134 ಗ್ರಾಂ ಗಾಂಜಾವನ್ನು ಬೆಡ್ ರೂಂನಲ್ಲಿ ಬಚ್ಚಿಟ್ಟಿದ್ದನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನು ಎಲ್ಲಿಂದ ತಂದಿದ್ದರು ಎನ್ನುವುದನ್ನು ತನಿಖೆ ನಡೆಸಲಾಗುತ್ತಿದೆ. ಇವರು ವೃತ್ತಿಯಲ್ಲಿ ವೈದ್ಯರಾಗಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.