ಫೆ. 2 ರಂದು ವಿಟಿಯು ವಾರ್ಷಿಕ ಘಟಿಕೋತ್ಸವ ಭಾಗ – 2

ಬೆಳಗಾವಿ : ಫೆಬ್ರವರಿ 2. ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ 25 ನೇ ವಾರ್ಷಿಕ ಘಟಿಕೋತ್ಸವ ಭಾಗ – 2 ನಡೆಯಲಿದ್ದು 25 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಹಾಗೂ 96 ವಿದ್ಯಾರ್ಥಿಗಳಿಗೆ ವಿವಿಧ ರ್ಯಾಂಕ್ ನೀಡಲಾಗುತ್ತಿದೆ ಎಂದು ವಿಟಿಯು ಕುಲಪತಿ ಡಾ. ವಿದ್ಯಾಶಂಕರ್ ಎಸ್. ಹೇಳಿದರು.
ಗುರುವಾರ ಬೆಳಗಾವಿ ವಿಟಿಯು ಸಭಾಂಗಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಇವರು. ಫೆಬ್ರವರಿ 2 ರಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಜ್ಞಾನ ಸಂಗಮದಲ್ಲಿ ಘಟಿಕೋತ್ಸವದ ಭಾಗ – 2 ನಡೆಯಲಿದೆ. ಅಧ್ಯಕ್ಷತೆಯನ್ನು ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ವಹಿಸಲಿದ್ದು, ಮುಖ್ಯ ಅತಿಥಿಯಾಗಿ ಫ್ಲಾಗ್ ಕರ್ನಾಟಕ ನೌಕಾ ನೆಲೆಯ ಆಫೀಸರ್ ಕಮಾಂಡಿಂಗ್ ರಿಯಲ್ ಅಡ್ಮಿರಲ್ ವಿಕ್ರಂ ಮೆನನ್ ಹಾಗೂ ಸಚಿವ ಡಾ.ಎಂ.ಸಿ.ಸುಧಾಕರ್ ಭಾಗವಹಿಸಲಿದ್ದಾರೆ ಎಂದರು.
ಎಂಬಿಎ, ಎಂಸಿಎ, ಎಂ. ಟೆಕ್, ಪಿ.ಎಚ್.ಡಿ ಸೇರಿದಂತೆ ಪ್ರವೇಶ ಪಡೆದಿದ್ದ 9,540 ವಿದ್ಯಾರ್ಥಿಗಳ ಪೈಕಿ, 8,702 ವಿದ್ಯಾರ್ಥಿಗಳು ಪ್ರಮಾಣ ಪತ್ರ ಪಡೆಯಲು ಅರ್ಹರಾಗಿದ್ದಾರೆ. ಘಟಿಕೊತ್ಸವದಲ್ಲಿ ಎಂಬಿಎ -4,928, ಎಂಸಿಎ -2,960, ಎಂ.ಟೆಕ್ – 718, ಎಂ. ಆರ್ಕ್- 59, ಎಂ.ಪ್ಲಾನ್ -21, ಎಂ. ಎಸ್ಸಿ -16 ಸೇರಿದಂತೆ ಒಟ್ಟಾರೆ -8,702 ವಿದ್ಯಾರ್ಥಿಗಳು ಪದವಿ ಪಡೆಯಲು ಅರ್ಹರಾಗಿದ್ದಾರೆ ಎಂದು ತಿಳಿಸಿದರು.
ಚಿನ್ನದ ಪದಕ ಪಡೆದವರು : ಶಿವಮೊಗ್ಗದ ಜವಾಹರ ಲಾಲ್ ನೆಹರು ಕಾಲೇಜ್ ಆಫ್ ಎಂಜಿನಿಯರಿಂಗ್ ಜೆ.ಪಾರ್ವತಿ ಸಾಲೇರಾ 4 ಚಿನ್ನದ ಪದಕ, ಬೆಂಗಳೂರಿನ ಆರ್. ಎನ್.ಎಸ್. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಎಚ್.ಸಿ. ಕಾವ್ಯ 3 ಚಿನ್ನದ ಪದಕ, ದಾವಣಗೆರೆ ಯುಬಿಡಿಟಿ ಕಾಲೇಜ್ ಆಫ್ ಎಂಜಿನಿಯರಿಂಗ್ ನ ಬಿ.ಎಸ್. ಸಂಚಿತಾ 3 ಚಿನ್ನದ ಪದಕ, ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿ. ಯೋಗೇಶ್ ಗೌಡ, ಬೆಂಗಳೂರಿನ ಜಿ. ಪಿ.ನಗರದ ಆಕ್ಸ್ಫರ್ಡ್ ಕಾಲೇಜ್ ಆಫ್ ಎಂಜಿನಿಯರಿಂಗ್ ನ ಸಿ. ರೇವಂತ ಕುಮಾರ್, ಬಳ್ಳಾರಿಯ ರಾವ್ ಬಹದ್ದೂರ್ ವೈ.ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಬಿ.ರಾಹುಲ್ ಡೇವಿಡ್ ತಲಾ ಎರಡು ಚಿನ್ನದ ಪದಕ ಪಡೆದಿದ್ದಾರೆ ಎಂದು ತಿಳಿಸಿದರು.
****************
ಇ – ವಿದ್ಯಾರ್ಥಿ ಮಿತ್ರ ಪೋರ್ಟಲ್ ಜಾರಿಗೆ
ವಿದ್ಯಾರ್ಥಿಗಳ ಕೊಂದು ಕೊರತೆ ಆಲಿಸಲು ಹಾಗೂ ಸಂವಹನ ನಡೆಸುವ ಉದ್ದೇಶದಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಇ – ವಿದ್ಯಾರ್ಥಿ ಮಿತ್ರ ಪೋರ್ಟಲ್ ಜಾರಿಗೆ ತಂದಿದೆ ಎಂದು ವಿಟಿಯು ಕುಲಪತಿ ಡಾ. ವಿದ್ಯಾಶಂಕರ್ ಎಸ್.ತಿಳಿಸಿದರು.
ತಂತ್ರಜ್ಞಾನದ ಮೂಲಕ ವಿಟಿಯು ಸಂಯೋಜಿತ ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ತ್ವರಿತವಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಒಂದೇ ವೇದಿಕೆ ಅಡಿಯಲ್ಲಿ ಎಲ್ಲಾ ವಿದ್ಯಾರ್ಥಿಗಳ ಕುಂದು ಕೊರತೆ ಆಲಿಸಲು ಇ – ವಿದ್ಯಾರ್ಥಿ ಮಿತ್ರ ಪೋರ್ಟಲ್ ಸಹಕಾರಿಯಾಗಲಿದೆ ಎಂದರು.
ಇ ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಳ್ಳಬಹುದು. ತಮ್ಮ ದೂರುಗಳನ್ನು ಪೋರ್ಟಲ್ ನಲ್ಲಿ ದಾಖಲಿಸಬೇಕು. ಇದನ್ನು ನೇರವಾಗಿ ಕುಲಪತಿಗಳ ಕಚೇರಿಗೆ ಸಂಪರ್ಕ ನೀಡಲಾಗಿದೆ. ಸಂಬಂಧಪಯವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ನೀಡುತ್ತಾರೆ ಎಂದರು.

