ವಿದ್ಯಾರ್ಥಿಗಳ ಸಮಸ್ಯೆ ಆಲಿಸಲು ವಿಟಿಯು ಹೊಸ ಮಾರ್ಗ…!

ಬೆಳಗಾವಿ : ವಿದ್ಯಾರ್ಥಿಗಳ ಕೊಂದು ಕೊರತೆ ಆಲಿಸಲು ಹಾಗೂ ಸಂವಹನ ನಡೆಸುವ ಉದ್ದೇಶದಿಂದ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ VTU BELAGAVI ಇ – ವಿದ್ಯಾರ್ಥಿ ಮಿತ್ರ ಪೋರ್ಟಲ್ ಜಾರಿಗೆ ತಂದಿದೆ ಎಂದು ವಿಟಿಯು ಕುಲಪತಿ ಡಾ. ವಿದ್ಯಾಶಂಕರ್ ಎಸ್.ತಿಳಿಸಿದರು.
ತಂತ್ರಜ್ಞಾನದ ಮೂಲಕ ವಿಟಿಯು ಸಂಯೋಜಿತ ಕಾಲೇಜು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ತ್ವರಿತವಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಲಾಗುತ್ತದೆ. ಒಂದೇ ವೇದಿಕೆ ಅಡಿಯಲ್ಲಿ ಎಲ್ಲಾ ವಿದ್ಯಾರ್ಥಿಗಳ ಕುಂದು ಕೊರತೆ ಆಲಿಸಲು ಇ – ವಿದ್ಯಾರ್ಥಿ ಮಿತ್ರ ಪೋರ್ಟಲ್ ಸಹಕಾರಿಯಾಗಲಿದೆ ಎಂದರು.
ಇ ಪೋರ್ಟಲ್ ನಲ್ಲಿ ವಿದ್ಯಾರ್ಥಿಗಳು ನೊಂದಣಿ ಮಾಡಿಕೊಳ್ಳಬಹುದು. ತಮ್ಮ ದೂರುಗಳನ್ನು ಪೋರ್ಟಲ್ ನಲ್ಲಿ ದಾಖಲಿಸಬೇಕು. ಇದನ್ನು ನೇರವಾಗಿ ಕುಲಪತಿಗಳ ಕಚೇರಿಗೆ ಸಂಪರ್ಕ ನೀಡಲಾಗಿದೆ. ಸಂಬಂಧಪಯವರು ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಸೂಕ್ತ ಪರಿಹಾರ ನೀಡುತ್ತಾರೆ ಎಂದರು.

