ರಸ್ತೆ ಅಪಘಾತದಲ್ಲಿ ಯೋಧ ಸಾವು…!

ಬೆಳಗಾವಿ : ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧ ಮೃತಪಟ್ಟ ಘಟನೆ ಸಂಭವಿಸಿದೆ.
ಬೆಳಗಾವಿ ತಾಲೂಕಿನ ಕಂಗ್ರಾಳಿ ಗ್ರಾಮದ ಯೋಧ ಜಗದೀಶ್ ಶಿಂಧೆ ಮೃತ ಯೋಧ. ಭಾರತೀಯ ಸೇನೆಯ ಆರ್ಮಿ ಏರ್ ಡಿಫೆನ್ಸ್ ನಲ್ಲಿ ಹವಾಲ್ದಾರ್ ಆಗಿ ಸೇವೆ ಸಲ್ಲಿಸುತ್ತಿದ್ದರು.
ಹರ್ಯಾಣದ ಅಂಬಾಲಾ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


