Select Page

Advertisement

Breaking : ಜೈಲು ಶಿಕ್ಷೆವಿಧಿಸಿ ಕೋರ್ಟ್ ಆದೇಶ ; ಭಾವುಕರಾದ 12 ಜನ..!

Breaking : ಜೈಲು ಶಿಕ್ಷೆವಿಧಿಸಿ ಕೋರ್ಟ್ ಆದೇಶ ; ಭಾವುಕರಾದ 12 ಜನ..!



ಬೆಳಗಾವಿ : ದೇಶದ ಗಮನ ಸೆಳೆದಿದ್ದ ಬೆಳಗಾವಿ ತಾಲೂಕಿನ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 12 ಜನ ಆರೋಪಿಗಳಿಗೆ ತಲಾ ಐದು ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಬೆಳಗಾವಿ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.

ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ಆರೋಪಿಗಳಿಗೆ ಆಯಾ ಸೆಕ್ಷನ್‌ಗಳ ಅಡಿಯಲ್ಲಿ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ಹೊರಡಿಸಿದರು.

ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಿಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿ ಶಿಕ್ಷೆಗೊಳಗಾದ ಅಪರಾಧಿಗಳು.ಶಿಕ್ಷೆ ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದ ಹಾಲ್‌ನಲ್ಲಿ ಆರೋಪಿಗಳು ಮತ್ತು ಅವರ ಕುಟುಂಬಸ್ಥರು ಭಾವುಕರಾದರು.

ಈ ವೇಳೆ ಸರ್ಕಾರಿ ವಿಶೇಷ ಅಭಿಯೋಜಕ ಎಲ್.ಎಸ್. ಸುಳ್ಳದ ಹಾಗೂ ಆರೋಪಿಗಳ ಪರ ವಕೀಲರಾದ ರವಿರಾಜ್ ಪಾಟೀಲ್ ಮತ್ತು ಶೇಖ್ ನ್ಯಾಯಾಲಯಕ್ಕೆ ಗೈರಾಗಿದ್ದರು.

Advertisement

Leave a reply

Your email address will not be published. Required fields are marked *

error: Content is protected !!