ಶ್ರೀಶೈಲಕ್ಕೆ ಬಸ್ ವ್ಯವಸ್ಥೆ ಕಲ್ಪಿಸಿ ; ಉಮೇಶ ನಂದಗಾಂವ
ಗೋಕಾಕ: ಪ್ರತಿ ವರ್ಷ ಯುಗಾದಿ ಹಬ್ಬದ ಪ್ರಯುಕ್ತ ಆಂಧ್ರ ಪ್ರದೇಶದ ಪ್ರಸಿದ್ಧ ಪವಿತ್ರ ಕ್ಷೇತ್ರವಾದ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಾರೆ. ಆದರೆ ನೇರ ರೈಲು ಸೌಲಭ್ಯ ಇಲ್ಲದ ಕಾರಣ ಭಕ್ತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಸಮಾಜ ಸೇವಕ ಉಮೇಶ ನಂದಗಾಂವ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ಯುಗಾದಿ ಹಬ್ಬದ ಸಮಯದಲ್ಲಿ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಿದರೆ ಭಕ್ತರಿಗೆ ಅನುಕೂಲವಾಗುವುದರ ಜೊತೆಗೆ ಸುರಕ್ಷಿತ ಹಾಗೂ ಸುಲಭ ಪ್ರಯಾಣ ಸಾಧ್ಯವಾಗುತ್ತದೆ. ವಿಶೇಷವಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಕುಟುಂಬ ಸಮೇತ ಪ್ರಯಾಣಿಸುವವರಿಗೆ ಇದು ಬಹಳ ಸಹಾಯಕವಾಗಲಿದೆ. ಬೆಳಗಾವಿ ಹಾಗೂ ಚಿಕ್ಕೋಡಿ ಸಂಸದರು ಮತ್ತು ರಾಜ್ಯ ಸಭಾ ಸದಸ್ಯರು. ರೈಲ್ವೆ ಇಲಾಖೆ ಈಮನವಿಗೆ ಸ್ಫಂಧಿಸಬೇಕು ಎಂದು ಮನವಿ ಮಾಡಿದ್ದಾರೆ.


