ಗೋಕಾಕ : ಕಾರಿನಲ್ಲಿ ರಿವಾಲ್ವರ್ ಇಟ್ಟುಕೊಂಡು ಓಡಾಡುತ್ತಿದ್ದ ವ್ಯಕ್ತಿಯನ್ನು ಗೋಕಾಕ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.‌

ಬಾಗಲಕೋಟೆ ಜಿಲ್ಲೆ ನಿವಾಸಿ ರಮೇಶ ಕೇಸರಗೊಪ್ಪ ಚೌಹಾನ್ (52) ಬಂಧಿತ ಆರೋಪಿ.‌ ಕಾರಿನಲ್ಲಿ ಪಿಸ್ತೂಲ್ ಇಟ್ಟುಕೊಂಡು ಗೋಕಾಕ್ ಕೋರ್ಟ ಗೆ ಬರುತ್ತಿದ್ದ.

ಆರೋಪಿಯನ್ನು ಬಂಧಿಸಿ ಶಸ್ತ್ರಾಸ್ತ್ರ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಗೋಕಾಕ್ ಶಹರ ಪೊಲೀಸರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.