Select Page

Advertisement

ಶ್ರೀಶೈಲಕ್ಕೆ ಹೊರಟಿದ್ದ ಕಾರು ಪಲ್ಟಿ ; ಇಬ್ಬರು ಸ್ಥಳದಲ್ಲೇ ದುರ್ಮರಣ

ಶ್ರೀಶೈಲಕ್ಕೆ ಹೊರಟಿದ್ದ ಕಾರು ಪಲ್ಟಿ ; ಇಬ್ಬರು ಸ್ಥಳದಲ್ಲೇ ದುರ್ಮರಣ



ವಿಜಯಪುರ : ಕಾರು ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ-ತಾಳಿಕೋಟೆ ಹೆದ್ದಾರಿಯಲ್ಲಿ ನಡೆದಿದೆ. ಬಸವನಹಟ್ಟಿಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ.

ಬೆಳಗಾವಿ ಮೂಲದ ನಲ್ವರು ಶ್ರೀಶೈಲಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ.
ಮೃತರನ್ನು ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರಪ್ಪಟಕ್ಕನ್ನವರ್ (70) ಹಾಗೂ ಕಾಮಪ್ಪ ಅವರಾದಿ (65) ಎಂದು ಗುರುತಿಸಲಾಗಿದೆ. ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!