Select Page

Advertisement

ನಿರ್ಗಮನದ ಸುಳಿವು ಕೊಟ್ಟರಾ ಸಿಎಂ ಸಿದ್ದರಾಮಯ್ಯ..! ಪುತ್ರ ಯತೀಂದ್ರರನ್ನು ಬೆಂಬಲಿಸುವಂತೆ ಕೇಳಿದ್ದೇಕೆ…?

ನಿರ್ಗಮನದ ಸುಳಿವು ಕೊಟ್ಟರಾ ಸಿಎಂ ಸಿದ್ದರಾಮಯ್ಯ..! ಪುತ್ರ ಯತೀಂದ್ರರನ್ನು ಬೆಂಬಲಿಸುವಂತೆ ಕೇಳಿದ್ದೇಕೆ…?



ಮೈಸೂರು : ಮುಖ್ಯಮಂತ್ರಿ ಬದಲಾವಣೆ ಚರ್ಚೆ ಮಧ್ಯೆ ಸಿಎಂ ಸಿದ್ದರಾಮಯ್ಯ ನಿರ್ಗಮನದ ಸುಳಿವು ನೀಡಿದರಾ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಮೂಡಿದೆ. ಪುತ್ರ ಯತೀಂದ್ರ ಅವರ ಕೈ ಬಿಡದಂತೆ ಸಿಎಂ ಸಿದ್ದರಾಮಯ್ಯ ಜನರಲ್ಲಿ ಮನವಿ ಮಾಡಿದ್ದು ಏಕೆ ಎಂಬುದು ಚರ್ಚೆಯ ವಿಷಯವಾಗಿದೆ.

ವರಕೋಡು ಗಡಿ ಗುರುಮಠ ವರುಣದಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಸಂಪ್ರೊಕ್ಷಣ ಪುನರ್ ಪ್ರತಿಷ್ಠಾಪನೆ ಕುಂಭಾಭಿಷೇಕ ಹಾಗೂ ಮಹಾದ್ವಾರ ಪೂಜಾ ಮಹೋತ್ಸವ ಭಾಗವಹಿಸಿ ಮಾತನಾಡುವ ವೇಳೆ ಯತೀಂದ್ರ ‌ಸಿದ್ದರಾಮಯ್ಯ ಅವರನ್ನು ಬಬಲಿಸುವಂತೆ ಕೇಳಿಕೊಂಡರು.

ನನ್ನ ಗುರುಗಳ ಮಾರ್ಗದರ್ಶನದಿಂದ ಶಿಕ್ಷಣ ಪಡೆದು, ವಕೀಲನಾಗಿ, ರಾಜಕಾರಣಿಯಾಗಿ ಜನರ ಸೇವೆ ಮಾಡುವ ಅವಕಾಶ ದೊರೆತಿದೆ. ನನ್ನ ರಾಜಕೀಯ ಜೀವನ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ. ನನ್ನ ಕೊನೆ ಉಸಿರುವವರೆಗೆ ಜನ ಸೇವೆಯಲ್ಲಿ ಸದಾ ತೊಡಗಿರುತ್ತೇನೆ ಎಂದರು.

“ಯತೀಂದ್ರ ಸಿದ್ದರಾಮಯ್ಯ ಈ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸುತ್ತಿದ್ದು, ಜನರು ಅವರನ್ನು ಬೆಂಬಲಿಸಬೇಕು ಎಂದರು.ರಾಜ್ಯದ ವಿವಿಧ ಜಾತಿ, ಧರ್ಮ, ವರ್ಗಗಳ ಬಡಜನರಿಗೆ ಅನೇಕ ಭಾಗ್ಯಗಳು ಹಾಗೂ ಗ್ಯಾರಂಟಿ ಕಾರ್ಯಕ್ರಮಗಳನ್ನು ನೀಡುತ್ತಾ ಬಂದಿದ್ದೇನೆ ಎಂದರು.”


ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಭಕ್ತಿ ಪರಿಶುದ್ಧವಾಗಿರಬೇಕಲ್ಲದೇ, ಮಾನವೀಯತೆ ಹಾಗೂ ಪರರ ಹಿತಚಿಂತನೆಯಿಂದ ಮಾತ್ರ ದೇವರು ಒಲಿಯುತ್ತಾನೆ. ದೇವರು ಸರ್ವಾಂತರ್ಯಾಮಿಯಾಗಿದ್ದಾನೆ. ಎಲ್ಲ ಧರ್ಮಗಳೂ ಪ್ರೀತಿಯನ್ನೇ ಬೋಧಿಸುತ್ತವೆ.

ಶ್ರೀ ಬೀರೇಶ್ವರಸ್ವಾಮಿ ದೇವಸ್ಥಾನದ ಪೂಜಾ ಮಹೋತ್ಸವಗಳು, ಜಾತ್ರೆಗಳಲ್ಲಿ ಜನರು ಸಂತೋಷದಿಂದ ಭಾಗವಹಿಸಿದ್ದಾರೆ. ಶ್ರೀ ಬೀರೇಶ್ವರಸ್ವಾಮಿ , ನಾಡಿನ ಸಮಸ್ತ ಜನತೆಗೆ ಮಂಗಳವನ್ನುಂಟು ಮಾಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

1978 ರಲ್ಲಿ ಈ ಪ್ರದೇಶದಿಂದಲೇ ನನ್ನ ರಾಜಕೀಯ ಜೀವನ ಪ್ರಾರಂಭವಾಗಿದ್ದು, ಅಪಾರ ಜನಬೆಂಬಲ ನನಗೆ ದೊರೆತಿದೆ. ಅಲ್ಲಿಂದ ಇಲ್ಲಿಯವರೆಗೆ ಚಾಮುಂಡೇಶ್ವರಿ ಮತ್ತು ವರುಣಾ ಕ್ಷೇತ್ರದ ಜನರು ನನ್ನನ್ನು ಬೆಂಬಲಿಸುತ್ತಲೇ ಬಂದಿದ್ದಾರೆ.

ಇಲ್ಲಿನ ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ, ಆರ್ಥಿಕ ಸಚಿವನಾಗಿ 17 ಬಾರಿ ಆಯವ್ಯಯಗಳನ್ನು ಮಂಡಿಸುವ ಅವಕಾಶ ದೊರೆತಿದೆ. 13 ಬಾರಿ ಚುನಾವಣೆಗಳನ್ನು ಎದುರಿಸಿದ್ದು, ನಾಲ್ಕು ಬಾರಿ ಸೋತ ಸಂದರ್ಭದಲ್ಲಿಯೂ , ಈ ಭಾಗದ ಜನರು ನನ್ನನ್ನೇ ಬೆಂಬಲಿಸಿದ್ದೇನೆ. ನನ್ನ ರಾಜಕೀಯ ಬದುಕಿಗೆ ಇಲ್ಲಿನ ಜನರ ಕೊಡುಗೆ ಅನನ್ಯವಾಗಿದೆ ಎಂದರು.


Advertisement

Leave a reply

Your email address will not be published. Required fields are marked *

error: Content is protected !!