Select Page

Advertisement

ಭೀಕರ ರಸ್ತೆ ಅಪಘಾತ ; ಮೂವರು ಪೊಲೀಸ್ ಅಧಿಕಾರಿಗಳು ಸಾವು

ಭೀಕರ ರಸ್ತೆ ಅಪಘಾತ ; ಮೂವರು ಪೊಲೀಸ್ ಅಧಿಕಾರಿಗಳು ಸಾವು



ಚಿತ್ರದುರ್ಗ : ಕಾರು ಹಾಗೂ ಲಾರಿ‌ ನಡುವೆ ಸಂಭವಿಸಿದ್ದ ‌ಭೀಕರ ರಸ್ತೆ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಳ್ಳಕೆರೆಯ ಹೆಗ್ಗೆರಿ ಗ್ರಾಮದ ಬಳಿ ಭಾನುವಾರ ಬೆಳಿಗ್ಗೆ ನಡೆದಿದೆ.

ಮೂರು RSI ಗಳಾದ ಮಂಜುನಾಥ (32), ಅಮರೇಶ್ ಹಾಗೂ ಸಚಿನ್ ಮೃತ ದುರ್ದೈವಿಗಳು. ಸ್ನೇಹಿತನ ಮದುವೆ ಕಾರ್ಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಮೂವರು ರಿಸರ್ವ್ ಪೊಲೀಸ್ ಅಧಿಕಾರಿಗಳಾಗಿದ್ದರು.

ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ RSI ಮಹಾಂತೇಶ ಹಾಗೂ RSI ಈಶ್ವರ್ ಗಂಭೀರವಾಗಿ ಗಾಯಗೊಂಡಿದ್ದು ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ಕೈಗೊಂಡಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!