ಉಪ ಚುನಾವಣೆ ಅಖಾಡ ; ಎರಡೂ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಘೋಷಣೆ
ಬೆಂಗಳೂರು : ಉಪ ಚುನಾವಣೆ ಅಖಾಡ ರಂಗು ಪಡೆಯುತ್ತಿದ್ದು ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.
ಬಾಗಲಕೋಟೆ ಕ್ಷೇತ್ರಕ್ಕೆ ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಅಳೆದು ತೂಗಿ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ ಘೋಷಣೆ ಮಾಡಿದ್ದಾರೆ.
ದಾವಣಗೆರೆಗೆ ಯಾರು ಅಭ್ಯರ್ಥಿ ಎಂಬ ಕುತೂಹಲ ಮೂಡಿತ್ತು. ರೇಣುಕಾಚಾರ್ಯ ಹಾಗೂ ಜಿ.ಎಂ ಸಿದ್ದೇಶ್ವರ ಬಣಗಳು ತಮ್ಮ ಬೆಂಬಲಿಗರ ಪರ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟಿದ್ದರು.
ಆದರೆ ಜಿ.ಎಂ ಸಿದ್ದೇಶ್ವರ ಅವರ ಬೆಂಬಲಿಗರಾದ ಶ್ರೀನಿವಾಸ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡುವ ಮೂಲಕ ಬಿಜೆಪಿ ಒಳ ಜಗಳಕ್ಕೆ ಬ್ರೆಕ್ ಹಾಕುವ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್ ಮಹತ್ವದ ನಿರ್ಧಾರ ಕೈಗೊಂಡಿದೆ.
ಇನ್ನೂ ಕಾಂಗ್ರೆಸ್ ನಿಂದ ಯಾರಿಗೆ ಟಿಕೆಟ್ ನೀಡಬೇಕು ಎಂಬ ಗೊಂದಲ ಮುಂದುವರಿದಿದೆ. ದಾವಣಗೆರೆಯಲ್ಲಿ ಮುಸ್ಲಿಂ ಸಮುದಾಯ ಟಿಕೆಟ್ ಬೇಡಿಕೆ ಇಟ್ಟಿದ್ದು ಕೈಗೆ ನುಂಗಲಾರದ ತುತ್ತಾಗಿದೆ. ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಮಲ್ಲಿಕಾರ್ಜುನ ಮೇಟಿ ಅವರಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.


