Select Page

Advertisement

ಸಿಕ್ಕಂಗ ಪೆಟ್ರೋಲ್, ಡಿಸೇಲ್ ತುಂಬಿಸಿಟ್ಟರೆ ಕಠಿಣ ಕ್ರಮ ; ಕಮಿಷನರ್ ಎಚ್ಚರಿಕೆ

ಸಿಕ್ಕಂಗ ಪೆಟ್ರೋಲ್, ಡಿಸೇಲ್ ತುಂಬಿಸಿಟ್ಟರೆ ಕಠಿಣ ಕ್ರಮ ; ಕಮಿಷನರ್ ಎಚ್ಚರಿಕೆ

ಬೆಳಗಾವಿ : ಇಂದನ ಸಿಗುತ್ತಿಲ್ಲ ಎಂಬ ವದಂತಿಗೆ ‌ಬಂಕ್ ಗಳಲ್ಲಿ ಪ್ಲಾಸ್ಟಿಕ್ ಬಾಟಲ್ ಹಾಗೂ ಟ್ಯಾಂಕ್ ಗಳಲ್ಲಿ ಪೆಟ್ರೋಲ್ ಹಾಗೂ ಡಿಸೇಲ್ ಹಾಕಿಕೊಳ್ಳುವುದು ಹಾಗೆಯೆ ಮಾರಾಟ ಮಾಡುವುದು ಕಾನೂನು ಬಾಹಿರವಾಗಿದ್ದು ಇಂತವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ನಗರ ಪೊಲೀಸ್ ಆಯುಕ್ತರ ಬೋರಸೆ ಖಡಕ್ ಎಚ್ಚರಿಕೆ ನೀಡಿದ್ದಾರೆ.‌

ಪೆಟ್ರೋಲಿಯಂ ಕಾಯ್ದೆ 1934 ಹಾಗೂ ಪೆಟ್ರೋಲಿಯಂ ಅಧಿನಿಯಮ 2002 ರ ಪ್ರಕಾರ ಪ್ಲಾಸ್ಟಿಕ್ ಬಾಟಲ್ ಗಳಲ್ಲಿ ಪೆಟ್ರೋಲ್ ಮಾರಾಟ ಮಾಡುವುದು ಸಂಪೂರ್ಣ ನಿಷೇಧವಾಗಿದ್ದು ಇದು ಕಂಡುಬಂದರೆ ಕಾನೂನು ‌ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ವದಂತಿ ಹರಡಿದರೆ ಕಾನೂನು ಕ್ರಮ-ಎಚ್ಚರಿಕೆ : ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಗೃಹಬಳಕೆ ಸಿಲಿಂಡರ್ ಹಾಗೂ ಇಂಧನದ ಯಾವುದೇ ಕೊರತೆಯಿಲ್ಲ.‌ ಸಾರ್ವಜನಿಕರು ವದಂತಿಗಳಿಗೆ ಕಿವಿಗೊಟ್ಟು ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದರು. ಬೆಳಗಾವಿ ಜಿಲ್ಲೆ ಹಾಗೂ ನಗರದಲ್ಲಿ ಯಾವುದೇ ರೀತಿಯಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಇಲ್ಲ. ಬಂಕ್ ಗಳಲ್ಲಿ ಸ್ಟಾಕ್ ಖಾಲಿಯಾದರೆ ನಗರದಲ್ಲಿ ಕೇವಲ ಐದು ಗಂಟೆಗಳಲ್ಲಿ ಸ್ಟಾಕ್‌ ಲಭ್ಯವಾಗಲಿದೆ. ಇಂಧನ ಕೊರತೆ ವದಂತಿಗೆ ಕಿವಿಗೊಡಬಾರದು ಎಂದರು.

ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಭೂಷಣ ಗುಲಾಬ್ ರಾವ್ ಭೋರಸೆ ಮಾತನಾಡಿ, ಯಾವುದೇ ಪೆಟ್ರೋಲ್‌ ಬಂಕ್ ಗಳಲ್ಲಿ ಬಾಟಲ್ ಅಥವಾ ಕ್ಯಾನ್ ಗಳಲ್ಲಿ ಇಂಧನ ಮಾರಾಟಕ್ಕೆ ಅವಕಾಶ ನೀಡುವುದಿಲ್ಲ‌; ಅಕ್ರಮವಾಗಿ ಇಂಧನ‌ ಸಂಗ್ರಹ ಮತ್ತು ಮಾರಾಟ ತಡೆಯಲು ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೇ ಶಾಂತ ರೀತಿಯಿಂದ ಸಹಕರಿಸಬೇಕು. ಏನೇ ಅಕ್ರಮ ಅಥವಾ ಗಲಾಟೆ ಕಂಡುಬಂದರೆ 112 ಸಂಖ್ಯೆಗೆ ಕರೆ ಮಾಡಿ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು.



Advertisement

Leave a reply

Your email address will not be published. Required fields are marked *

error: Content is protected !!