Select Page

Advertisement

ಬೆಳಗಾವಿ : ಮಧ್ಯರಾತ್ರಿ ಬಾರ್ ನಲ್ಲಿ ಗಲಾಟೆ ; ಮಾರಕಾಸ್ತ್ರಗಳಿಂದ ಹಲ್ಲೆ..!

ಬೆಳಗಾವಿ : ಮಧ್ಯರಾತ್ರಿ ಬಾರ್ ನಲ್ಲಿ ಗಲಾಟೆ ; ಮಾರಕಾಸ್ತ್ರಗಳಿಂದ ಹಲ್ಲೆ..!



ಬೆಳಗಾವಿ : ನಗರದ ಖಡೇ ಬಜಾರ್ ಪ್ರದೇಶದಲ್ಲಿರುವ ಜನತಾ ಬಾರ್‌ನಲ್ಲಿ ವೇಟರ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆದ ಘಟನೆ ಸೋಮವಾರ ರಾತ್ರಿ ನಡೆದಿದೆ.

ಸಂತೋಷ ಧನವಾಡೆ (30) ಎಂಬ ವೇಟರ್ ಮೇಲೆ ದುಷ್ಕರ್ಮಿಗಳು ಏಕಾಏಕಿ ದಾಳಿ ನಡೆಸಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಕೆಎಲ್‌ಇ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಘಟನೆಯ ಮಾಹಿತಿ ತಿಳಿದ ತಕ್ಷಣವೇ ಮಾರ್ಕೆಟ್ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಯ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!