Select Page

ಬೆಳಗಾವಿ – ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಬೆಳಗಾವಿ – ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

ಹುಕ್ಕೇರಿ : ತಾಲೂಕಿನ ಯರನಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ದಿಲೀಪ ಅಪ್ಪಾಸಾಹೇಬ ಬಿರಾದಾರ (55) ಅವರು ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾದರು.

ರವಿವಾರ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ಸರಕಾರಿ ನೌಕರರ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ವೇಳೆ ಈಜುತ್ತಿರುವಾಗಲೇ ಹೃದಯಾಘಾತ ಸಂಭವಿಸಿ ಸ್ಥಳದಲ್ಲೇ ಕೊನೆಯುಸಿರೆಳೆದರು.

ಮೃತರು ತಂದೆ, ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಮೃತರ ಪತ್ನಿ ಯಮಕನಮರಡಿ ಸರಕಾರಿ ಶಾಲೆಯಲ್ಲಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಮೃತರ ನಿಧನಕ್ಕೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.



Advertisement

Leave a reply

Your email address will not be published. Required fields are marked *

error: Content is protected !!