Select Page

ಸಿಎಂ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ; ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ

ಸಿಎಂ ಸ್ಥಾನಕ್ಕೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ; ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಕಾರ್ಯದರ್ಶಿಗೆ ಪತ್ರ



ಬೆಂಗಳೂರು : ಸಿದ್ದರಾಮಯ್ಯ (Siddaramaiah) ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ಅಧಿಕೃತವಾಗಿ ಇದೀಗ ರಾಜೀನಾಮೆ ನೀಡಿದ್ದಾರೆ. ಹೈಕಮಾಂಡ್ ಸೂಚನೆ ಹಾಗೂ ಕಾಂಗ್ರೆಸ್ ಆಂತರಿಕ ಒಪ್ಪಂದದ ಹಿನ್ನಲೆಯಲ್ಲಿ ಸುಧೀರ್ಘ ಚರ್ಚೆಗಳ ಬಳಿಕ ಇಂದು ಅವರು ತಮ್ಮ ಹುದ್ದೆಯನ್ನು ತ್ಯಜಿಸಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ.

ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಪ್ರತಿಕ್ರಿಯೆ
ವಿಶೇಷವೆಂದರೆ, ರಾಜ್ಯಪಾಲರಾದ ಧಾವರ್ಚಂದ್ ಗೆಹ್ಲೋಟ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇಲ್ಲದ ಕಾರಣ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಭವನಕ್ಕೆ ಖುದ್ದಾಗಿ ತೆರಳಿ ರಾಜ್ಯಪಾಲರ ಕಾರ್ಯದರ್ಶಿ ಪ್ರಭುಶಂಕರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಮುಖ್ಯಮಂತ್ರಿಗಳು ರಾಜೀನಾಮೆ ನೀಡಲು ರಾಜಭವನಕ್ಕೆ ತೆರಳಿದ ಸಂದರ್ಭದಲ್ಲಿ ಇದೇ ಸಚಿವ ಸಂಪುಟದ ಸಹೋದ್ಯೋಗಿಗಳು ಹಾಗೂ ಪ್ರಮುಖವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜೊತೆಯಲ್ಲೇ ಇದ್ದು ಸಾಥ್ ನೀಡಿದರು. ಬೆಳಗ್ಗೆ ನಡೆದ ಉಪಹಾರ ಕೂಟದಲ್ಲಿ ನಿರ್ಧಾರವು ಅಂತಿಮಗೊಂಡಿದ್ದು, ನಂತರ ರಾಜೀನಾಮೆ ಸಲ್ಲಿಸಲಾಗಿದೆ.

Advertisement

Leave a reply

Your email address will not be published. Required fields are marked *

error: Content is protected !!