Select Page

ಬೆಳಗಾವಿ ರಾಜಕಾರಣದಲ್ಲಿ ಹೊಸ ಆಟ : ಸವದಿಗೆ ಸಿಗುತ್ತಾ ಸಚಿವಸ್ಥಾನ..?

ಬೆಳಗಾವಿ ರಾಜಕಾರಣದಲ್ಲಿ ಹೊಸ ಆಟ : ಸವದಿಗೆ ಸಿಗುತ್ತಾ ಸಚಿವಸ್ಥಾನ..?



ಬೆಂಗಳೂರು : ಸಿಎಂ ಸಿದ್ದರಾಮಯ್ಯ ರಾಜೀನಾಮೆ ನಂತರದಲ್ಲಿ ಕಾಂಗ್ರೆಸ್ ನಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿವೆ. ನಾಳೆಯೇ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದ್ದು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯಾಗಲಿದೆ.

ನೂತನ ಮುಖ್ಯಮಂತ್ರಿ ಸಂಪುಟದಲ್ಲಿ ಸ್ಥಾನ ಪಡೆಯಲು ಶಾಸಕರು ಹರಸಾಹಸ ನಡೆಸುತ್ತಿದ್ದಾರೆ. ಈ ಮಧ್ಯೆ ಬೆಳಗಾವಿ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ‌ನಡೆಯುತ್ತಿದ್ದು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಲಕ್ಷ್ಮಣ ಸವದಿಗೆ ಸಚಿವಸ್ಥಾನ ಸಿಗುವ ಸಾಧ್ಯತೆ ಇದೆ.

ಹೌದು ಪ್ರಬಲ ಲಿಂಗಾಯತ ಸಮುದಾಯಕ್ಕೆ ಸೇರಿರುವ ಲಕ್ಷ್ಮಣ ಸವದಿ ಬಿಜೆಪಿ ತೊರೆದ ನಂತರದಲ್ಲಿ ಕಾಂಗ್ರೆಸ್ ಗೆ ಉತ್ತರ ಕರ್ನಾಟಕ ಭಾಗದಲ್ಲಿ ಸಾಕಷ್ಟು ಲಾಬಲಭವಾಗಿದೆ. ಈ ಎಲ್ಲಾ ಅಂಶ ಪರಿಗಣಿಸಿರುವ ಡಿಕೆಶಿ ಸವದಿಗೆ ಸಚಿವಸ್ಥಾನ ನೀಡುವ ಕುರಿತು ಒಲವು ತೋರಿಸಿದ್ದಾರೆ.

ಇನ್ನು ಮಹತ್ವದ ಬೆಳವಣಿಗೆ ಏನೆಂದರೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಶಾಸಕ ಸತೀಶ್ ಜಾರಕಿಹೊಳಿ ಸಿಹಿ ಸುದ್ದಿ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಆದರೆ ರಾಜ್ಯಾಧ್ಯಕ್ಷ ಸ್ಥಾನ ಪಡೆದರೆ ಸಚಿವಸ್ಥಾನ ತ್ಯಾಗ ಮಾಡುವ ಅನಿವಾರ್ಯತೆ ಸೃಷ್ಟಿಯಾಗುವ ಸಾಧ್ಯತೆ ಇದೆ.

ಒಬ್ಬರಿಗೆ ಒಂದೇ ಹುದ್ದೇ ಎಂಬುದು ಕಾಂಗ್ರೆಸ್ ಪಕ್ಷದಲ್ಲಿ ನಿಯಮ ಮಾಡಲಾಗಿದೆ‌. ಈ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಒಂದೇ ಹುದ್ದೆ ಸಿಗುವ ಸಾಧ್ಯತೆ ಇದ್ದು ಇವರಿಂದ ತೆರವಾದ ಸ್ಥಾನಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರನ್ನು ಪರಿಗಣಿಸುವ ಕುರಿತು ಚರ್ಚೆ ನಡೆಯುತ್ತಿದೆ.

ಸಚಿವಸ್ಥಾನ ಪಡೆಯುವ ನಿಟ್ಟಿನಲ್ಲಿ ಲಕ್ಷ್ಮಣ ಸವದಿ ಕಸರತ್ತು ನಡೆಸಿದ್ದಾರೆ. ಈ ಹಿಂದೆಯೂ ಹೈಕಮಾಂಡ್ ನಾಯಕರು ನಿಮ್ಮನ್ನು ಒರಿಗಣಿಸುತ್ತೇವೆ ಎಂಬ ಮಾತು ಹೇಳಿದ್ದು, ಈ ಬಾರಿ ಸಂಪುಟದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Advertisement

Leave a reply

Your email address will not be published. Required fields are marked *

error: Content is protected !!