Select Page

ತಂಗಡಗಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮನವಿ

ತಂಗಡಗಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಮನವಿ

ವಿಜಯಪುರ : ಕೊಪ್ಪಳ ಜಿಲ್ಲೆಯ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರು, ಜನಪ್ರಿಯ ಶಾಸಕರು ಹಾಗೂ ಭೋವಿ ವಡ್ಡರ ಸಮಾಜದ ಹಿರಿಯ ಮುಖಂಡರಾದ ಶ್ರೀ ಶಿವರಾಜ ತಂಗಡಗಿ ಅವರಿಗೆ ಉಪಮುಖ್ಯಮಂತ್ರಿ ನೀಡಿ ಸಚಿವರನ್ನಾಗಿ ನೇಮಕ ಮಾಡಬೇಕೆಂದು ಭೋವಿ ವಡ್ಡರ ಸಮಾಜದ ಯುವ ಮುಖಂಡರಾದ ಡಾ. ಅರ್ಜುನ ಬಂಡಿ ಅವರು ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಮತ್ತು ಪಕ್ಷದ ಹಿರಿಯರಲ್ಲಿ ಭೋವಿ ವಡ್ಡರ ಸಮಾಜದ ಪರವಾಗಿ ಮನವಿ ಮಾಡಿದ್ದಾರೆ.

ಶ್ರೀ ಶಿವರಾಜ ತಂಗಡಗಿ ಅವರು ಕಾಂಗ್ರೆಸ್ ಸರಕಾರದ ಸತತ ಮೂರು ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜನರ ಆಶೀರ್ವಾದದಿಂದ ಆಯ್ಕೆಯಾಗಿದ್ದು, ತಮ್ಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಶಿಕ್ಷಣ, ರಸ್ತೆ, ಕುಡಿಯುವ ನೀರು, ಸಾಮಾಜಿಕ ನ್ಯಾಯ ಹಾಗೂ ಬಡವರ ಕಲ್ಯಾಣಕ್ಕಾಗಿ ಅವರು ಸಲ್ಲಿಸಿರುವ ಸೇವೆ ಅಪಾರವಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಸದಾ ಸ್ಪಂದಿಸುವ ಜನನಾಯಕರೆಂದು ಗುರುತಿಸಿಕೊಂಡಿರುವ ಅವರು, ಕಂಗ್ರೇಸ್ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ.

ರಾಜ್ಯದಾದ್ಯಂತ ಲಕ್ಷಾಂತರ ಜನಸಂಖ್ಯೆ ಹೊಂದಿರುವ ಭೋವಿ ವಡ್ಡರ ಸಮಾಜಕ್ಕೆ ಸಚಿವ ಸಂಪುಟದಲ್ಲಿ ಉಪಮುಖ್ಯಮಂತ್ರಿ ಪ್ರಾತಿನಿಧ್ಯ ದೊರಕಿಲ್ಲ ಎಂಬ ಬೇಸರ ಸಮಾಜದ ಜನರಲ್ಲಿ ಇದೆ. ಈ ಹಿನ್ನೆಲೆಯಲ್ಲಿ ಸಮಾಜದ ಆಶೋತ್ತರಗಳಿಗೆ ಸ್ಪಂದಿಸಿ, ಅನುಭವೀ ನಾಯಕ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ಜೋತೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರವು ಭೋವಿ ವಡ್ಡರ ಸಮಾಜದ ಮನವಿಯನ್ನು ಗಂಭೀರವಾಗಿ ಪರಿಗಣಿಸಿ, ಸಮಾಜದ ಗೌರವ ಹಾಗೂ ಹಕ್ಕುಗಳನ್ನು ಕಾಪಾಡುವ ನಿಟ್ಟಿನಲ್ಲಿ ಶ್ರೀ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ಮತ್ತು ಉಪಮುಖ್ಯಮಂತ್ರಿ ನೀಡಿ ಸಮಾಜದ ನಿರೀಕ್ಷೆಗಳನ್ನು ಈಡೇರಿಸಬೇಕು ಎಂದು ಸಮಾಜದ ಮುಖಂಡರು ಆಗ್ರಹಿಸಿದ್ದಾರೆ.

Advertisement

Leave a reply

Your email address will not be published. Required fields are marked *

error: Content is protected !!