ಯುವತಿಗೆ ಲೈಂಗಿಕ ಕಿರುಕುಳ ; ಕಾಂಗ್ರೆಸ್ ನಾಯಕಿ ಆಯೇಶಾ ವಿರುದ್ಧ ಪ್ರಕರಣ ದಾಖಲು

ಬೆಳಗಾವಿ : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡ ಯುವಕನ ಪರ ನಿಂತು ಸಂತ್ರಸ್ತ ಯುವತಿಗೆ ಜೀವ ಬೆದರಿಕೆ ಹಾಕಿದ್ದ ಬೆಳಗಾವಿ ಕಾಂಗ್ರೆಸ್ ನಾಯಕಿ ಆಯೇಶಾ ಸನದಿ ವಿರುದ್ಧ ನಗರದ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವತಿಗೆ ಖಾನಾಪುರ ಮೂಲದ ಬದ್ರುದ್ದಿನ್ ಕಿಲ್ಲೆದಾರ್ ಎಂಬಾತ ಮದುವೆಯಾಗುವುದಾಗಿ ನಂಬಿಸಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ. ನಂತರ ಬೆಳಗಾವಿ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ಎಂಬುವವರಿಂದ ಮಹಿಳೆಗೆ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಕ್ಷಣದ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ.
ಆಯೇಶಾ ಸನದಿ ಕಿರುಕುಳಕ್ಕೆ ಬೇಸತ್ತ ಸಂತ್ರಸ್ತ ಮಹಿಳೆ ಕಳೆದ ಮಂಗಳವಾರ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ಸಾವು, ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ. ಸಧ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ಪೋಷಕರು ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಬದ್ರುದ್ದಿನ್ ಕಿಲ್ಲೆದಾರ್ ಹಾಗೂ ಆಯೇಶಾ ಸನದಿ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಏನಿದು ಪ್ರಕರಣ : ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ದೈಹಿಕವಾಗಿ ಬಳಸಿಕೊಂಡ ಹುಡುಗನ ಜೊತೆ ಮದುವೆ ಆಗಬಾರದು. ಇಲ್ಲವಾದರೆ ನಿನ್ನ ಖಾಸಗಿ ಕ್ಷಣದ ಫೋಟೋಗಳನ್ನು ಮಾಧ್ಯಮಕ್ಕೆ ಕೊಡುವುದಾಗಿ ಬೆದರಿಕೆ ಹಾಕುತ್ತಿದ್ದಾಳೆ ಎಂದು ಬೆಳಗಾವಿ ಕಾಂಗ್ರೆಸ್ ಮುಖಂಡೆ ವಿರುದ್ಧ ಆರೋಪ ಕೇಳಿಬಂದಿತ್ತು.
ಸಲೀಂ ಕಿಲ್ಲೇದಾರ್ ಎಂಬಾತ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ದೈಹಿಕ ಸಂಬಂಧ ಬೆಳಿಸಿದ್ದಲ್ಲದೆ, ಖಾಸಗಿ ಕ್ಷಣದ ಫೋಟೋಗಳನ್ನು ಇಟ್ಟುಕೊಂಡಿದ್ದಾನೆ. ಈಗ ಸಂತ್ರಸ್ತ ಯುವತಿ ಸಲೀಂ ಎಂಬ ಯುವಕನಿಗೆ ಮದುವೆ ಆಗುವಂತೆ ಕೇಳುತ್ತಿದ್ದಾಳೆ. ಆದರೆ ಬೆಳಗಾವಿ ಕಾಂಗ್ರೆಸ್ ಮುಖಂಡೆ ಆಯೇಶಾ ಸನದಿ ಯುವಕನನ್ನು ಬಿಟ್ಟುಬಿಡು, ಇಲ್ಲವಾದರೆ ನಿನ್ನ ಖಾಸಗಿ ಕ್ಷಣದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಕಿರುಕುಳ ನೀಡುತ್ತಿದ್ದಾಳೆ ಎಂದು ಯುವತಿಯ ಪೋಷಕರು ಗಂಭೀರ ಆರೋಪ ಮಾಡಿದ್ದರು.
ಸಚಿವ ಸತೀಶ್ ಜಾರಕಿಹೊಳಿ, ಇವರ ಪಿಎ ನನಗೆ ಪರಿಚಯ ಇದ್ದಾರೆ. ಪೊಲೀಸ್ ಠಾಣೆಯಲ್ಲಿ ನನ್ನ ಮಾತು ನಡೆಯುತ್ತದೆ. ಯಾವುದೇ ಕಾರಣಕ್ಕೂ ಯುವಕನನ್ನು ಮದುವೆ ಆಗಬಾರದು ಎಂದು ಕಾಂಗ್ರೆಸ್ ಮುಖಂಡೆ ಆಯೇಷಾ ಸನದಿ ಬೆದರಿಕೆ ಹಾಕುತ್ತಿದ್ದು, ಇದರಿಂದ ನೊಂದ ಸಂತ್ರಸ್ತ ಯುವತಿ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದು ಸಾವು, ಬದುಕಿನ ನಡುವೆ ಹೋರಾಡುತ್ತಿದ್ದು ಕೂಡಲೇ ನಮಗೆ ನ್ಯಾಯ ಒದಗಿಸುವಂತೆ ಯುವತಿಯ ಪೋಷಕರು ಸಧ್ಯ ಪ್ರಕರಣ ದಾಖಲಿಸಿದ್ದಾರೆ.


