ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ ; ಕಾರು ಪಲ್ಟಿ..!
ಅಥಣಿ : ತಾಲೂಕಿನ ಗೋಕಾಕ್ – ಅಥಣಿ ಮುಖ್ಯ ರಸ್ತೆಯಲ್ಲಿ ಮಂಗಳವಾರ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಕಾರು ಪಲ್ಪಿಯಾಗಿದೆ.
ಹಲ್ಯಾಳ ಸಕ್ಕರೆ ಕಾರ್ಖಾನೆ ಸಮೀಪದಲ್ಲಿ ದುರ್ಘಟನೆ ಸಂಭವಿಸಿದ್ದು ವಿಜಯಪುರ ಮೂಲದ ವ್ಯಕ್ತಿಗಳಿಗೆ ಸೇರಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.
ಕಾರಿನಲ್ಲಿದ್ದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

