Select Page

ಪ್ರಧಾನಿಯಾಗಿ ಮೋದಿ 12 ವರ್ಷ ಸುದೀರ್ಘ ಸೇವೆ ; ವಿವಿಧ ಸೇವಾ ಕಾರ್ಯ ಆಯೋಜನೆ

ಪ್ರಧಾನಿಯಾಗಿ ಮೋದಿ 12 ವರ್ಷ ಸುದೀರ್ಘ ಸೇವೆ ; ವಿವಿಧ ಸೇವಾ ಕಾರ್ಯ ಆಯೋಜನೆ



ಬೆಳಗಾವಿ : 12 ವರ್ಷಗಳ ಸುದೀರ್ಘ ಅವಧಿಗೆ ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿ ಆಡಳಿತ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ವಿವಿಧ ಸೇವಾ ಮತ್ತು ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.

ಈ ವೇಳೆ ಸಸಿ ನೆಡುವುದು, ಎಣ್ಣೆ ರಹಿತ ಅಡುಗೆ ತರಬೇತಿ ಶಿಬಿರ, ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.‌ ಕಾರ್ಯಕ್ರಮದ ಮೂಲಕ ಪರಿಸರ ಸಂರಕ್ಷಣೆ, ಸ್ವಚ್ಛತೆಯ ಮಹತ್ವ, ಆರೋಗ್ಯಕರ ಆಹಾರ ಪದ್ಧತಿ ಹಾಗೂ ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. “ಸೇವೆಯೇ ಸಂಘಟನೆ” ಎಂಬ ಧ್ಯೇಯದೊಂದಿಗೆ ಸಮಾಜಮುಖಿ ಚಟುವಟಿಕೆಗಳನ್ನು ಮತ್ತಷ್ಟು ಬಲಪಡಿಸುವ ಸಂಕಲ್ಪವನ್ನು ಕಾರ್ಯಕರ್ತೆಯರು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಹಿಳಾ ಮೋರ್ಚಾ ಕರ್ನಾಟಕ ರಾಜ್ಯ ಕಾರ್ಯದರ್ಶಿ ಡಾ. ಸೋನಾಲಿ ಸರನೋಬತ್, ಜಿಲ್ಲಾ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರಿಯಾಂಕಾ ಅಜರೆಕರ್, ಗ್ರಾಮೀಣ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ಪಾಟೀಲ, ಜಿಲ್ಲಾ ಮಹಿಳಾ ಮೋರ್ಚಾ ಕಾರ್ಯದರ್ಶಿ ಭಾಗ್ಯಶ್ರೀ ಕೋಕಿಟ್ಕರ್ ಸೇರಿದಂತೆ ಮಹಿಳಾ ಮೋರ್ಚಾದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತೆಯರು ಉಪಸ್ಥಿತರಿದ್ದರು.


Advertisement

Leave a reply

Your email address will not be published. Required fields are marked *

error: Content is protected !!