ಬೆಂಗಳೂರು: ರಾಜ್ಯದಲ್ಲಿ (Karnataka) ನೈಋತ್ಯ ಮುಂಗಾರು (Monsoon) ಚುರುಕುಗೊಂಡಿದ್ದು, ಭಾರತೀಯ ಹವಾಮಾನ ಇಲಾಖೆ (IMD) ಮುಂದಿನ 5 ದಿನಗಳ ಕಾಲ ಕರ್ನಾಟಕದಾದ್ಯಂತ ವ್ಯಾಪಕ ಮಳೆಯಾಗುವ (Rain) ಮುನ್ಸೂಚನೆ ನೀಡಿದೆ.
ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಪ್ರಸ್ತುತ ಹವಾಮಾನವು ಸಾಮಾನ್ಯವಾಗಿಯೇ ಇದ್ದು, ಕಳೆದ ವಾತಾವರಣದಿಂದ ಕೊಡಿದ್ದು, ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿರಲಿದೆ.
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಮುಂಗಾರು ತೀವ್ರಗೊಂಡಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ‘ಯೆಲ್ಲೋ ಅಲರ್ಟ್’ ನೀಡಲಾಗಿದೆ.
ಹಗಲಿನ ವೇಳೆಯಲ್ಲಿ ಪಶ್ಚಿಮ ದಿಕ್ಕಿನಿಂದ ಗಂಟೆಗೆ ಸುಮಾರು 13 ಮೈಲಿ ವೇಗದಲ್ಲಿ ತಂಗಾಳಿ ಬೀಸುತ್ತಿದ್ದು, ಗಾಳಿಯಲ್ಲಿನ ಆರ್ದ್ರತೆ (Humidity) ಶೇಕಡಾ 67 ದಾಖಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಚಿತ್ತದುರ್ಗ ಜಿಲ್ಲೆಗಳಲ್ಲಿ ಜೂನ್ 28 ಮತ್ತು 29ರಂದು ಶೇಕಡಾ 65 ರಷ್ಟು ಸಾಧ್ಯತೆಯಿಂದ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಮುಂದಿನ ದಿನಗಳಲ್ಲಿ ತಾಪಮಾನವು 26 ರಿಂದ 29 ಡಿಗ್ರಿ ಸೆಲ್ಸಿಯಸ್ಗೆ ಕುಸಿಯಲಿದ್ದು, ಆರ್ದ್ರತೆ ಶೇಕಡಾ 80 ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಜುಲೈ ಮೊದಲ ವಾರದವರೆಗೂ ಮಳೆಯ ಆರ್ಭಟ ಮುಂದುವರಿಯಲಿದ್ದು, ಸಾರ್ವಜನಿಕರು ಹಾಗೂ ರೈತರು ಅಗತ್ಯ ಮುನ್ನೆಚ್ಚರಿಕೆಗಳನ್ನು ವಹಿಸುವಂತೆ ಹವಾಮಾನ ಕೇಂದ್ರ ಸೂಚಿಸಿದೆ.
ಮುಂದಿನ 5 ದಿನ ರಾಜ್ಯದಲ್ಲಿ ವ್ಯಾಪಕ ಮಳೆ ; ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್


