ಬೆಳಗಾವಿ : ಸಿಸಿಪಿ ಪೊಲೀಸರ ಕಾರ್ಯಾಚರಣೆ ವೇಳೆ
ಹೆರಾಯಿನ್ ಮಾರುತ್ತಿದ್ದ ಆರೋಪಿಯನ್ನು ಬಂಧಿಸಿದ್ದು 9 ಲಕ್ಷ ಮೌಲ್ಯದ ಹೆರಾಯಿನ್ ವಶಪಡಿಸಿಕೊಂಡ ಘಟನೆ ನಡೆದಿದೆ.
ಮಂಗಳವಾರ ಸಿಸಿಬಿ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬೆಳಗಾವಿ ಗಂಗಾಧರ ನಗರ ನಿವಾಸಿ ರಾಘವೇಂದ್ರ ಮುರ್ಕಟನಾಳ (36) ಬಂದಿತ ಆರೋಪಿ.
ಬಂಧಿತರಿಂದ 9.5 ಲಕ್ಷ ಮೌಲ್ಯದ 45.18 ಗ್ರಾಂ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸಿಸಿಪಿ ಇನ್ಸ್ಪೆಕ್ಟರ್ ಮಂಜುನಾಥ ನಾಯಿಕ ಮಾರ್ಗದರ್ಶನದಲ್ಲಿ ಪಿಎಸ್ಐ ಮಂಜುನಾಥ ಭಜಂತ್ರಿ ಹಾಗೂ ಸಿಬ್ಬಂದಿಗಳು ಯಶಸ್ವಿಯಾಗಿ ದಾಳಿ ನಡೆಸಿದ್ದು ಇವರ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.


