ಮೂಡಲಗಿ : ಉತ್ತರ ಕರ್ನಾಟಕ ಭಾಗದಲ್ಲಿನ ಜನರು ಮಳೆಯಾಗಲೆಂದು ಅನೇಕ ಸಂಪ್ರದಾಯಗಳನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ಈ ಬಾರಿಯಂತೂ ಮುಂಗಾರು ಮುನಿಸಿಕೊಂಡಿದರಿಂದ  ಮಳೆಯಾಗಲಿ ಎಂದು ಪ್ರಾರ್ಥಿಸಿಕೊಂಡ ಗ್ರಾಮಸ್ಥರು ಕತ್ತೆಗಳ ಮದುವೆ ಮಾಡಲು ಮುಂದಾಗಿದ್ದಾರೆ.

ಕತ್ತೆಗಳ ಮದುವೆ ಮಾಡಿದರೆ ಮಳೆ ಬರುತ್ತದೆ ಎಂಬ ನಂಬಿಕೆ ಅನೇಕ ಕಡೆಗಳಲ್ಲಿದೆ. ಹೀಗಾಗಿ ಮೂಡಲಗಿ ತಾಲೂಕಿನ ಮುನ್ಯಾಳ ಗ್ರಾಮದ ಹನುಮಾನ ದೇವಸ್ಥಾನ ಅವರಣದಲ್ಲಿ  ರವಿವಾರ ಜು 5 ರಂದು ಮಧ್ಯಾಹ್ನ 12-15ಕ್ಕೆ    ಕತ್ತೆಗಳ ಮದುವೆ ಮಾಡಲು ನಿರ್ಧರಿಸಿದ್ದು ಈಗಾಗಲೇ ಮದುವೆಗೆ ಸಂಬಂಧಪಟ್ಟಂತೆ ಆಮಂತ್ರಣ ಪತ್ರಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಬಾರಿ ಸದ್ದು ಮಾಡುತ್ತಿದೆ.

ಗಂಡು ಕತ್ತೆಗೆ ಕಾಂತೇಶ ಎಂದೂ, ಹೆಣ್ಣು ಕತ್ತೆಗೆ ಕಸ್ತೂರಿ ಎಂದು ನಾಮಕರಣ ಮಾಡಲಾಗಿತ್ತು. ಗ್ರಾಮದಲ್ಲಿ ಎರಡು ಪಂಗಡಗಳನ್ನು ಮಾಡಿ, ಒಂದು ಪಂಗಡ ವರನ ಕಡೆಯೂ ಮತ್ತೊಂದು ಪಂಗಡ ವಧುವಿನ ಕಡೆಗೂ ಕೆಲಸ ಮಾಡುತ್ತಿದ್ದಾರೆ. ಹೀಗೆ ಮಾಡುವುದರಿಂದ ಮಳೆಯಾಗುತ್ತದೆ ಎನ್ನುವ ನಂಬಿಕೆ ಸ್ಥಳೀಯರದ್ದಾಗಿದೆ.