ಯರಗಟ್ಟಿ : ಪತ್ನಿ ಹಾಗೂ ಅತ್ತೆಯ ಕಿರುಕುಳಕ್ಕೆ ಬೇಸತ್ತು ಪ್ರಾಥಮಿಕ ಶಾಲಾ ಶಿಕ್ಷಕ ಆತ್ಮಹತ್ಯೆಗೆ ಶರಣಾದ ಘಟನೆ ಯರಗಟ್ಟಿ ಸಮೀಪದ ಸತ್ತಿಗೇರಿ ಗ್ರಾಮದಲ್ಲಿ ನಡೆದಿದೆ.
ತಾಲೂಕಿನ ಸತ್ತಿಗೇರಿ ನಿವಾಸಿ ಸಂತೋಷಸಿಂಗ್ ಮಾರುತಿಸಿಂಗ್ ರಜಪೂತ(38) ಆತ್ಮಹತ್ಯೆಗೆ ಶರಣಾದ ಶಿಕ್ಷಕ. ಸಮೀಪದ ಅಕ್ಕಿಸಾಗರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಉತ್ತಮ ಶಿಕ್ಷಕ ಹೆಗ್ಗಳಿಕೆ ಗಳಿಸಿದ್ದರು.
ಶಿಕ್ಷಕ ಆತ್ಮಹತ್ಯೆ ಸುದ್ದಿ ತಿಳಿಯುತ್ತಲೇ ಯರಗಟ್ಟಿ ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಘಟನೆ ಬಗ್ಗೆ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಶಿಕ್ಷಕನಿಗೆ ತಂದೆ, ತಾಯಿ, ಇಬ್ಬರು ಮಕ್ಕಳು ಸೇರಿ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.


