ಬೆಳಗಾವಿ : ಅಪ್ರಾಪ್ತೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಬೆಳಕಿಗೆ ಬಂದಿದ್ದು, ಈ ಸಂಬಂಧ ಸವದತ್ತಿ ವ್ಯಾಪ್ತಿಯ ಪೊಲೀಸ್ ಠಾಣೆ ಒಂದರಲ್ಲಿ ಪ್ರಕರಣ ದಾಖಲಾಗಿದೆ.
ಉಮೇಶ ರಮೇಶ ನೇಸರಗಿ ಎಂಬಾತ ಆರೋಪಿ ಅಪ್ರಾಪ್ತ ಬಾಲಕಿಯನ್ನು ಏಪ್ರಿಲ್ 7 ರಂದು ಅಪಹರಿಸಿ ಬಾಲಕಿಮೇಲೆ ದೌರ್ಜನ್ಯ ವೆಸಗಿದ ಆರೋಪಿಯನ್ನು ಪೊಲೀಸರು ಮಂಗಳವಾರ ಪತ್ತೆ ಮಾಡಿ, ಈತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ಬಾಲಕಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿದ ಬಳಿಕ ಮಹಿಳಾ ಸಾಂತ್ವನ ಕೇಂದ್ರಕ್ಕೆ ವರ್ಗಾಯಿಸುವುದಾಗಿ ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ ತಿಳಿಸಿದೆ.
ಸ್ಥಳಕ್ಕೆ ಸಿಪಿಐ ಐ. ಎಮ್. ಮಠಪತಿ, ಪಿಎಸ್ಐ ಎಲ್. ಬಿ. ಮಾಳಿ ಭೇಟಿನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


