ಯರಗಟ್ಟಿ : ಕ್ಷುಲ್ಲಕ ಕಾರಣಕ್ಕೆ ಸಹೋದರರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಯರಗಟ್ಟಿ ತಾಲೂಕಿನ ನುಗ್ಗಾನಟ್ಟಿ ಗ್ರಾಮದಲ್ಲಿ ನಡೆದಿದೆ.

ಲಗಮಪ್ಪ ರಾಮಣ್ಣವರ (32), ಬಸಪ್ಪ ರಾಮಣ್ಣವರ (38) ಕೊಲೆಯಾದ ದುರ್ದೈವಿಗಳು. ಕ್ಷುಲ್ಲಕ ಕಾರಣಕ್ಕೆ ಸಹೋದರ ನಡುವೆ ನಡೆದ ಜಗಳ ಕಲೆಯಲ್ಲಿ ಅಂತ್ಯವಾಗಿದೆ ಎಂದು ಹೇಳಲಾಗುತ್ತಿದೆ.
ಕೌಟುಂಬಿಕ ವಿಚಾರಕ್ಕೆ ಸಂಬಂಧಿಸಿದಂತೆ ಸಹೋದರ ಸಂಬಂಧಿಕರ ನಡುವೆ ನಡೆದ ಜಗಳವು ತೀವ್ರ ಸ್ವರೂಪ ಪಡೆದು, ಸುಮಾರು 6 ಜನರು ಸೇರಿ ಹಲ್ಲೆ ನಡೆಸಿ ಇಬ್ಬರನ್ನು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಘಟನೆಯ ಸಂಬಂಧ ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಘಟನೆಯ ನಿಖರ ಕಾರಣ ತಿಳಿಯಲು ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಎಸ್.ಪಿ ಕೆ. ರಾಮರಾಜನ್, ಹೆಚ್ಚುವರಿ ಎಸ್.ಪಿ. ಬಸರಗಿ, ಮುರಗೋಡ ಸಿಪಿಐ ಐ. ಎಂ. ಮಠಪತಿ, ಮುರಗೋಡ ಪಿಎಸ್ಐ ಎಲ್. ಬಿ. ಮಾಳಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



