ಬೆಂಗಳೂರು : ಕರಾವಳಿ ಭಾಗದಲ್ಲಿ ಮಳೆ ಆರ್ಭಟ ಜೋರಾದ ಹಿನ್ನೆಲೆಯಲ್ಲಿ ‌ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ‌ಮಾಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆ ಆರ್ಭಟ ಜೋರಾಗಿದೆ. ಜೊತೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು ಈ ಹಿನ್ನೆಲೆಯಲ್ಲಿ ರಜೆ ಘೋಷಣೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನಿರಂತರ ಗಾಳಿ ಮಳೆ ಹಿನ್ನೆಲೆಯಲ್ಲಿ ನದಿಗಳು ತುಂಬಿ ಹರಿಯುತ್ತಿವೆ. ಜೊತೆಗೆ ಮಳೆ ಆರ್ಭಟಕ್ಕೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಿದ್ಯಾರ್ಥಿಗಳಿಗೆ ತೊಂದರೆ ಹಿನ್ನೆಲೆಯಲ್ಲಿ ರಜೆ ನಿರ್ಧಾರ ಪ್ರಕಟಿಸಲಾಗಿದೆ.