ನೀಟ್ ಪರೀಕ್ಷೆ (NEET exam) ಅಕ್ರಮದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗಳನ್ನು ಉಲ್ಲೇಖಿಸಿ ಮುಸ್ಲಿಂ ಸಮುದಾಯದ ವಿರುದ್ಧ ವಿವಾದಾತ್ಮಕ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ವಿಧಾನಪರಿಷತ್ ಸದಸ್ಯ (MLC) ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಬಿಜೆಪಿ ಆಯೋಜಿಸಿದ್ದ ‘ಯೂತ್ ಫಾರ್ ನೇಷನ್’ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ವೇಳೆ ಅವರು ಈ ಹೇಳಿಕೆ ನೀಡಿದ್ದರು. ನೀಟ್ ಪರೀಕ್ಷೆಗೂ ಮುಸ್ಲಿಮರಿಗೂ ಏನು ಸಂಬಂಧ?
ಅವರ ಏಕೈಕ ಮಂತ್ರ ಎಂದರೆ ಅಕ್ಷರಶಃ ಇಲ್ಲ, ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.

ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೋ
ಕೊಡಬೇಕು ಅಂತಾರೆ. ಮೋದಿ ಹಠವೋ ಅಂತಾರೆ ಅವರಿಗೂ ನೀಟ್ ಪೇಪರ್ ಲೀಕ್ ಆಗಿದ್ದಕ್ಕೆ ಏನು ಸಂಬಂಧ? ಭಾರತ ವಿರೋಧಿಗಳು ಮತ್ತು ಕೆಲವು ಗ್ಯಾಂಗ್‌ಗಳು ಅಲ್ಲಿ ಬಂದು ಮಾತನಾಡುತ್ತಿದ್ದಾರೆ ಎಂದರು.

ಭಾರತ್ ತೇರೆ ತುಕ್ಡೇ ಹೋಂಗೆ, ಇನ್ ಶಾ ಅಲ್ಲಾ’ ಎಂದು ಘೋಷಣೆ ಕೂಗಿದ ತುಕ್ಡೇ ಗ್ಯಾಂಗ್‌ಗಳೇ ಈ ಹೋರಾಟದಲ್ಲಿ ಭಾಗವಹಿಸುತ್ತಿವೆ,” ಎಂದು ವಾಗ್ದಾಳಿ ನಡೆಸಿದ್ದರು.

ಧಾರ್ಮಿಕ ಭಾವನೆಗೆ ಧಕ್ಕೆ: ಜಾಮೀಯಾ ಮಸೀದಿ ಅಧ್ಯಕ್ಷರಿಂದ ದೂರು

ಸಿ.ಟಿ. ರವಿ ಅವರ ಈ ಹೇಳಿಕೆಯು ಮುಸ್ಲಿಂ ಸಮುದಾಯದ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಮತ್ತು ಸಮಾಜದಲ್ಲಿ ದ್ವೇಷ ಹಾಗೂ ಅಶಾಂತಿ ಹರಡುವ ಉದ್ದೇಶವನ್ನು ಹೊಂದಿದೆ ಎಂದು ಆರೋಪಿಸಿ ಚಿಕ್ಕಮಗಳೂರಿನ ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.