ಬೆಳಗಾವಿ : ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಹಾಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ನಡುವೆ ವೈಮನಸ್ಯ ಏರ್ಪಟ್ಟಿದೆ ಎಂಬ ವಿಚಾರವಾಗಿ ಸಧ್ಯ ಎಲ್ಲೆಡೆ ಊಹಾಪೋಹಗಳು ನಡೆಯುತ್ತಿವೆ. ಈ ಘಟನೆ ಕುರಿತು ಮತ್ತೊಮ್ಮೆ ಸಿದ್ದರಾಮಯ್ಯ ಪುತ್ರ ಸಚಿವ ಯತೀಂದ್ರ ಅವರೇ ಪ್ರತಿಕ್ರಿಯೆ ನೀಡಿದ್ದಾರೆ.

ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ‌ಸಭೆ ಉದ್ದೇಶಕ್ಕಾಗಿ ಬೆಳಗಾವಿ ನಗರಕ್ಕೆ ಆಗಮಿಸಿರುವ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮಾಧ್ಯಮಗಳು ಸಿದ್ದರಾಮಯ್ಯ ಹಾಗೂ ಸಚಿವ ಸತೀಶ್ ಜಾರಕಿಹೊಳಿ ನಡುವಿನ ವೈಮನಸ್ಸಿನ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.

ಸತೀಶ್ ಜಾರಕಿಹೊಳಿ ಹಾಗೂ ಸಿದ್ದರಾಮಯ್ಯ ನಡುವೆ ಬಾಂಧವ್ಯ ಚೆನ್ನಾಗಿದೆ. ಸಿದ್ದರಾಮಯ್ಯನವರು ರಾಜೀನಾಮೆ ನೀಡಿದ ವೇಳೆ ಇದಕ್ಕೆ ಅವರು ಕಾರಣ, ಇವರು ಕಾರಣ ಎಂದು ಸಾಮಾಜಿಕ ಜಾಲತಾಣದಲ್ಲಿ ಊಹಾಪೋಹ ಹರಿಬಿಡಲಾಗಿದೆ. ಇವರ ಮಧ್ಯೆ ಏನೂ ಇಲ್ಲ ಎಂದರು.

ಆದರೆ ಈಗಾಗಲೇ ಸಚಿವ ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯನವರ ಜೊತೆಗೆ ಕೆಲ ವೈಮನಸ್ಸು ಇರುವ ಕುರಿತು ಒಪ್ಪಿಕೊಂಡಿದ್ದಾರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಇವರು, ಈ ಪ್ರಶ್ನೆಯನ್ನು ಅವರಿಗೆ ಕೇಳಬೇಕೆಂದು ಹೇಳಿ ಸುಮ್ಮನಾದರು.