ಸಚಿವ ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ಈಗಾಗಲೇ ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಭಾಗವಹಿಸಿದ್ದ ಸಿಎಂ ಹಾಗೂ ಮಾಜಿ ಸಿಎಂ ರಾಜ್ಯಕ್ಕೆ ಮರಳಲಿದ್ದು, ಬರುವ ಸೋಮವಾರ ಸಂಪುಟ ವಿಸ್ತರಣೆ ಮುಹೂರ್ತ ಫಿಕ್ಸ್ ಎಂದು ತಿಳಿದುಬಂದಿದೆ.
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಕೆ.ಸಿ ವೇಣುಗೋಪಾಲ, ಸುರ್ಜೇವಾಲಾ ಮಹತ್ವದ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಡಿ.ಕೆ ಶಿವಕುಮಾರ್ ಸಂಪುಟದಲ್ಲಿ 18 ಸ್ಥಾನ ತುಂಬಲು ಹೈಕಮಾಂಡ್ ನಾಯಕರು ಒಪ್ಪಿಗೆ ಸೂಚಿಸಿದ್ದಾರೆ. ಇನ್ನುಳಿದಂತೆ ಇದರಲ್ಲಿ ಇಬ್ಬರು ಮಹಿಳೆಯರು ಇರಲಿದ್ದಾರೆ ಎಂಬ ಮಾಹಿತಿಯೂ ತಿಳಿದುಬರುತ್ತಿದೆ.
ಈಗಾಗಲೇ ರಾಜ್ಯ ನಾಯಕರ ಅಭಿಪ್ರಾಯ ಪಡೆದಿರುವ ಕಾಂಗ್ರೆಸ್ ಹೈಕಮಾಂಡ್ ನಾಯಕರು ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಿದ್ದಾರೆ.


