ಬೆಳಗಾವಿ : ಕೊನೆಗೂ ಡಿ.ಕೆ ಸರಕಾರದ ಸಂಪುಟ ವಿಸ್ತರಣೆ ಕಸರತ್ತು ಮುಕ್ತಾಯವಾಗಿದ್ದು 20 ಶಾಸಕರಿಗೆ ಮಂತ್ರಿ ಪದವಿ ನೀಡಲಾಗಿದೆ. ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಅಥಣಿ ಶಾಸಕ ಲಕ್ಷ್ಮಣ ಸವದಿಗೆ ಸಿಹಿ ಸುದ್ದಿ ಸಿಕ್ಕಿದೆ.

ಬೆಳಗಾವಿ ಜಿಲ್ಲೆಗೆ ಎರಡು ಮಂತ್ರಿ ಸ್ಥಾನ ಲಭಿಸಿದ್ದು ಈಗಾಗಲೇ ಸತೀಶ್ ಜಾರಕಿಹೊಳಿ ಮಂತ್ರಿ ಪದವಿ ಪಡೆದಿದ್ದಾರೆ. ಸಂಪುಟ ವಿಸ್ತರಣೆ ವೇಳೆ‌ ಲಕ್ಷ್ಮಣ ಸವದಿಗೂ ಅವಕಾಶ ಲಭಿಸಿದೆ.

ಇನ್ನೂ ಪಂಚಮಸಾಲಿ ನಾಯಕ ವಿಜಯಾನಂದ ಕಾಶಪ್ಪನವರ ಅವರಿಗೂ ಮಂತ್ರಿ ಸ್ಥಾನ ಸಿಕ್ಕಿದ್ದು ಕಾಂಗ್ರೆಸ್ ಹೈಕಮಾಂಡ್ ಅಳೆದು ತೂಗಿ ನಿರ್ಧಾರ ಕೈಗೊಂಡಿದೆ. ಈ‌ ಕೆಳಗಿನ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಕಳುಹಿಸಿದ್ದು ಇಂದು ಸಂಜೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.