ಬೆಂಗಳೂರು : ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.
ಗುಟ್ಕಾ ನಿಷೇಧದಂತಹ ಗಂಭೀರ ಆದೇಶವನ್ನು ತನ್ನ ಗಮನಗ್ಗೆ ತರದೇ ಆರೋಗ್ಯ ಇಲಾಖೆ ಕಾರ್ಯದರ್ಶಿಯೇ ಈ ಆದೇಶ ಹೊರಡಿಸಿದಕ್ಕೆ ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ.ಶಿವಕುಮಾರ್, ಗುಟ್ಕಾ ನಿಷೇಧ ಆದೇಶ ವಾಪಸ್ ಪಡೆಯುವಂತೆ ಸೂಚನೆ ನೀಡಿದ್ದಾರೆ.
ಏಕಾಏಕಿ ಗುಟ್ಕಾ ನಿಷೇದ್ಹ ಆದೇಶ ಹೊರಡಿಸಿದರೆ ಅಡಿಕೆ ಬೆಳೆಗಾರರ ಮೇಲೆ ಉಂಟಾಗುವ ಪರಿಣಾಮದ ಬಗ್ಗೆ ಲೆಕ್ಕಿಸದೇ ಇಂತಹ ಆದೇಶ ಹೊರಡಿಸಿದ್ದು ಸರಿಯಲ್ಲ. ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳ ಜನರ ಬದುಕು ಅಡಿಕೆ ಬೆಳೆಯನ್ನು ಅವಲಂಭಿಸಿದ್ದು ಗುಟ್ಕಾ ಬ್ಯಾನ್ ನಿಂದ ಅವರ ಬದುಕು ದುಸ್ಥರವಾಗಲಿದೆ.
ಈ ಬಗ್ಗೆ ಶಾಸಕರುಗಳು ತಮ್ಮ ಅಳಲು ತೀಓಡಿಕೊಂಡಿದ್ದರು.
ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಗುಟ್ಕಾ ನಿಷೇಧ ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
ಗುಟ್ಕಾ ನಿಷೇಧ ಆದೇಶ ಹೊರಡಿಸಿದ ಬಗ್ಗೆ ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ. ಶಿವಕುಮಾರ್, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹೀಗಾಗಿ, ಗುಟ್ಕಾ ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಸೂಚನೆ ನೀಡಿದ್ದಾರೆ.



