ತುಮಕೂರು : ಮಾಜಿ ಶಿಕ್ಷಣ ಸಚಿವ ಹಾಗೂ ಬಿಜೆಪಿ ನಾಯಕ ಬಿ.ಸಿ ನಾಗೇಶ್ (67) ಅನಾರೋಗ್ಯದಿಂದ ಮಂಗಳವಾರ ಬೆಂಗಳೂರಿನ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ.
ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ವೃತ್ತಿಯಲ್ಲಿ ಬಿ.ಇ ಇಂಜಿನಿಯರಿಂಗ್ ಪದವಿ ಹೊಂದಿದ್ದ ಅವರು ಆರ್ ಎಸ್ ಎಸ್ ಕಟ್ಟಾಳು ಆಗಿದ್ದರು.
ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಪರ ಸ್ಪರ್ಧಿಸಿ ಎರಡು ಬಾರಿ ಶಾಸಕರಾಗಿದ್ದರು. ಶಿಕ್ಷಣ ಸಚಿವರಾಗಿ ಕಾರ್ಯ ನಿರ್ವಹಿಸಿದ್ದ ಇವರು ಹಲವು ಸುಧಾರಣೆ ತಂದಿದ್ದರು.
ಮೃತರ ಪಾರ್ಥಿವ ಶರೀರವನ್ನು ಸ್ವಗ್ರಾಮ ತಿಪಟೂರಿಗೆ ಕೊಂಡೊಯ್ಯುವ ಕಾರ್ಯ ನಡೆದಿದ್ದು ಮುಂದಿನ ಕಾರ್ಯಗಳು ನಡೆಯಲಿವೆ.


