ಬೆಳಗಾವಿ : ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯಿಂದ ನಾಲ್ಕು ಲಕ್ಷ ರೂ. ಹಣ ವಸೂಲಿ ಮಾಡಿ ಮೋಸ ಮಾಡಿದ್ದ ಮೂವರು ಆರೋಪಗಳನ್ನು ಬಂಧಿಸುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ.

ತಾಲುಕಿನ ದೇವರಡ್ಡೇರಹಟ್ಟಿ ಗ್ರಾಮದ ನುಭಾಷ ನಾಯಿಕ್ ಎಂಬಾತನಿಗೆ ನೀರಾವರಿ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ವಂಚಿಸಿ ಹತ್ತು ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟು 4 ಲಕ್ಷ ಹಣ ಪಡೆದ ಮೂವರು ಆರೋಪಿಗಳು ಸಧ್ಯ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಅಥಣಿ ತಾಲೂಕಿನ ಮುರಗುಂಡಿ ಗ್ರಾಮದ ಭರತೇಶ ಶೇಡಬಾಳ, ತಂಗಡಿ ಗ್ರಾಮದ ಪ್ರದೀಪ ಕಾಂಬಳೆ, ಉಗಾರ್ ಖುರ್ದ್ ರಾವಸಾಬ ಪಾಟೀಲ್ ಬಂಧಿತ ಆರೋಪಿಗಳು. ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.