ಭಾಗಲಕೋಟೆ : ರಾಜ್ಯದಲ್ಲಿ ಸಕ್ಕರೆ ದರ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಈ ನಡುವೆ ಸಕ್ಕರೆ ದರ (sugar prices Hike) ಏರಿಕೆಗೆ ಪ್ರತಿಕ್ರಿಯಿಸಿರುವ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ ( Laxman Savadi ) ದಾಸ್ತಾನು ಕಡಿಮೆಯಾಗಿರುವುದೇ ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.
ಕಬ್ಬು ಬೆಳೆಗಾರರಿಗೆ ಅನುಕೂಲ!
ಸಕ್ಕರೆ ದರ ಏರಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ಗಮನ ಹರಿಸಬೇಕು. ಸಕ್ಕರೆ ಕಾರ್ಖಾನೆಗಳನ್ನು ಇನ್ನಷ್ಟು ಹೆಚ್ಛಾಗಿ ಆರಂಭಿಸುವ ಅಗತ್ಯವಿದೆ. ಇದರಿಂದ ಮುಂದಿನ ದಿನಗಳಲ್ಲಿ ಗ್ರಾಹಕರ ಮೇಲಿನ ಹೊರೆ ಕಡಿಮೆಯಾಗುವುದರ ಜೊತೆಗೆ ಕಬ್ಬು ಬೆಳೆಗಾರರಿಗೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.
ಕಳೆದೊಮ್ಮೆ ಸಿನಿಮಾ ಮಂದಿರ, ಮಾಲ್‌ಗಳಲ್ಲಿ ನೀರಿಗೆ ದುಬಾರಿ ಬೆಲೆ ಕೊಟ್ಟು ಖರೀದಿ ಮಾಡುತ್ತಾರೆ. ಹಾಗಿದ್ದಾಗ ಸಕ್ಕರೆಗೆ ಹಣ ಕೊಟ್ಟು ಖರೀದಿ ಮಾಡಿದರೆ, ರೈತರಿಗೆ ಸಹಾಯವಾಗುತ್ತದೆ ಎನ್ನುವ ಅರ್ಥದಲ್ಲಿ ಸಚಿವರು, 100 ರೂ. ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ. 50 ರೂಪಾಯಿ ಕೊಟ್ಟು ಸಕ್ಕರೆ ಖರೀದಿಸಿದರೆ ಏನು ಆಗಲ್ಲ. ಸಕ್ಕರೆ ದರ ಹೆಚ್ಚಾದರೆ ಕಬ್ಬು ಬೆಳೆಗಾರರಿಗೆ ಅನುಕೂಲ ಆಗುತ್ತದೆ ಎಂದಿದ್ದಾರೆ.
ಸಕ್ಕರೆ ದರ ಏರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಲಕ್ಷ್ಮಣ ಸವದಿ ಒತ್ತಾಯಿಸಿದ್ದಾರೆ.



