ಬೆಳಗಾವಿ : ಉಗಾರ ಶುಗರ್ ಕಾರ್ಖಾನೆಯ ಎಥೆನಾಲ್ ಘಟಕವನ್ನು ಬಂದ್ ಮಾಡುವಂತೆ ರಾಜ್ಯ ಮಾಲಿನ್ಯ ‌ನಿಯಂತ್ರಣ ಮಂಡಳಿ ಕ್ರಮ ವಿರೋಧಿಸಿ ಸಾವಿರಾರು ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡಿರುವ ಘಟನೆ ಶುಕ್ರವಾರ ನಡೆದಿದೆ.

ಕಾಗವಾಡ ತಾಲೂಕಿನ ಉಗಾರ ಗ್ರಾಮದಲ್ಲಿರುವ ಉಗಾರ್ ಸಕ್ಕರೆ ಕಾರ್ಖಾನೆಯಲ್ಲಿನ ಎಥೆನಾಲ್ ಘಟಕ ಬಂದ್ ಮಾಡುವಂತೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ ನೀಡಿದೆ. ಪರಿಸರ ಮಾಲಿನ್ಯ ಹಿನ್ನೆಲೆಯಲ್ಲಿ ಮಂಡಳಿ ಕ್ರಮಕ್ಕೆ ಮುಂದಾಗಿದೆ.

ಆದರೆ ಸಾವಿರಾರು ಕಾರ್ಮಿಕರು ಬದುಕು ಕಟ್ಟಿಕೊಂಡಿರುವ ಸಕ್ಕರೆ ಕಾರ್ಖಾನೆಯ ಎಥೆನಾಲ್ ಘಟಕವನ್ನು ಬಂದ್ ಮಾಡಿದರೆ ಜನರಿಗೆ ತೊಂದರೆ ಆಗುತ್ತದೆ ಎಂದು ಆಗ್ರಹ ಜೋರಾಗಿದೆ.

ಶುಕ್ರವಾರ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಕಾರ್ಮಿಕರು ಮಾಲಿನ್ಯ ನಿಯಂತ್ರಣ ಮಂಡಳಿ ಕ್ರಮ ವಿರೋಧಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.‌