ಬೆಳಗಾವಿ : ಲೋಕೋಪಯೋಗಿ ಹಾಗೂ ಬೆಳಗಾವಿ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿಗೆ ಶಾಕ್ ನೀಡಿರುವ ಇಡಿ ಮನೆ ಮೇಲೆ ದಾಳಿ ನಡೆಸಿದೆ.

ಬೆಂಗಳೂರು, ಬೆಳಗಾವಿ, ಮಹಾರಾಷ್ಟ್ರ ಸೇರಿದಂತೆ 15 ಕಡೆ ದಾಳಿ ನಡೆದಿದೆ. ಮಂಜುನಾಥ್‌ ಅಬಕಾರಿ ಅಕ್ರಮದ ಮೇಲೆ ಈ ಹಿಂದೆ ಇ.ಡಿ ದಾಳಿ ಮಾಡಿತ್ತು. 18 ಅನಧಿಕೃತ ಲೈಸೆನ್ಸ್‌ ಕೊಡುವುದಕ್ಕೆ ಸತೀಶ್‌ ಜಾರಕಿಹೊಳಿ ಸಹಾಯ ಮಾಡಿದ್ದರೆಂಬ ಆರೋಪ ಇದೆ.

ವಿದೇಶದಲ್ಲಿ ಹಣ ಹೂಡಿಕೆಗೆ ಜಾರಕಿಹೊಳಿ ಸಹಾಯ ಮಾಡಿದ್ದ ಆರೋಪವಿದೆ. 3 ಕೋಟಿಯಷ್ಟು ಅಕ್ರಮ ವಿದೇಶಿ ಹಣ ಪತ್ತೆಯಾಗಿತ್ತು. ಸಚಿವರಾಗಿದ್ದಾಗ ಪ್ರಭಾವ ಬಳಸಿ 18 ಬಾರ್‌ ಲೈಸೆನ್ಸ್‌ ನೀಡಿದ್ದರು ಎನ್ನಲಾಗಿದೆ. ಬಾರ್‌ನಿಂದ ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆ ಈಗ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.