ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತರ ಮನೆ ಮೇಲೂ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಸತೀಶ್ ಜಾರಕಿಹೊಳಿ ಅವರ ಆಪ್ತ ಡಾ. ಗಿರೀಶ್ ಸೋನವಾಲಕರ್ ಅವರ ನಿವಾಸದ ಮೇಲೆ ಇ.ಡಿ. ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳಗಾವಿ ನಗರದ ಲಕ್ಷ್ಮೀ ಟಕಡಿ ಪ್ರದೇಶದಲ್ಲಿರುವ ಡಾ. ಗಿರೀಶ್ ಸೋನ್ವಾಲಕರ್ ಅವರ ನಿವಾಸದಲ್ಲಿ ಅಧಿಕಾರಿಗಳು ದಾಖಲೆಗಳು ಹಾಗೂ ಇತರ ಮಾಹಿತಿಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಇ.ಡಿ. ಅಧಿಕಾರಿಗಳ ಪರಿಶೀಲನೆ ನಡೆಯುತ್ತಿರುವ ಬೆನ್ನಲ್ಲೇ ಆಪ್ತರ ನಿವಾಸದಲ್ಲೂ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.