ಬೆಳಗಾವಿ : ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮನೆ ಸೇರಿದಂತೆ ಆಪ್ತರ ಮನೆ ಮೇಲೆ ಇಡಿ ಅಧಿಕಾರಿಗಳ ಶೋಧ ಕಾರ್ಯ ಮುಂದುವರಿದಿದ್ದು ಈ ಸಚಿವರ ಆಪ್ತ ಸಹಾಯಕ‌‌ ಮಲಗೌಡ ಪಾಟೀಲ ಅವರ ಮನೆ ಮೇಲೆಯೂ ಇಡಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ.

ಬೆಳಗಾವಿ ನಗರದ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಪಿಎ ಮಲಗೌಡ ಪಾಟೀಲ ಅವರ ನಿವಾಸದ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಸಂಬಂಧಿಸಿದ ಹಲವು ಸ್ಥಳಗಳಲ್ಲಿ ಇ.ಡಿ ಅಧಿಕಾರಿಗಳ ಶೋಧ ಕಾರ್ಯಾಚರಣೆ ನಡೆಯುತ್ತಿರುವ ಬೆನ್ನಲ್ಲೇ, ಇದೀಗ ಅವರ ಆಪ್ತ ಸಹಾಯಕನ ನಿವಾಸದ ಮೇಲೂ ದಾಳಿ ನಡೆದಿರುವುದು ಕುತೂಹಲ ಮೂಡಿಸಿದೆ.

ದಾಳಿಯ ವೇಳೆ ದಾಖಲೆಗಳು ಹಾಗೂ ಇತರ ಮಾಹಿತಿಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿರುವುದಾಗಿ ತಿಳಿದುಬಂದಿದೆ.