ಬೆಳಗಾವಿ : ಕೇಂದ್ರ ಸರಕಾರ ತನಿಖಾ ಸಂಸ್ಥೆ ಬಳಸಿಕೊಂಡು‌
ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಮೇಲೆ ದಾಳಿ‌ ನಡೆಸಿದ್ದು ಖಂಡನೀಯ ಎಂದು ಯುವ ಕಾಂಗ್ರೆಸ್ (ಮುರಗೊಡ) ಬ್ಲಾಕ್ ಅಧ್ಯಕ್ಷರಾದ ದಾದಾಪೀರ ಜಮಾದಾರ ಹೇಳಿದರು.

ಕೇಂದ್ರ ತನಿಖಾ ಸಂಸ್ಥೆಗಳನ್ನು ಕಾಂಗ್ರೆಸ್ ಪಕ್ಷದ ನಾಯಕರ ವಿರುದ್ಧ ರಾಜಕೀಯ ಉದ್ದೇಶಗಳಿಗೆ ಬಳಸಲಾಗುತ್ತಿದೆ ಎಂಬ ಆರೋಪಗಳು ನಿರಂತರವಾಗಿ ಕೇಳಿಬರುತ್ತಿವೆ. ತನಿಖಾ ಸಂಸ್ಥೆಗಳು ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗದೆ, ಕಾನೂನು ಮತ್ತು ಸಾಕ್ಷ್ಯಗಳ ಆಧಾರದ ಮೇಲೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ED ಮತ್ತು CBI ತನಿಖಾ ಸಂಸ್ಥೆಗಳೇ ಅಥವಾ ಬಿಜೆಪಿ ಸರ್ಕಾರದ ರಾಜಕೀಯ ಅಸ್ತ್ರಗಳೇ? ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಪ್ರಶ್ನೆಗೆ ಉತ್ತರಿಸಬೇಕು.

ದಾಳಿ, ಒತ್ತಡ ಮತ್ತು ಬೆದರಿಕೆಯ ಮೂಲಕ ಸತೀಶ್ ಜಾರಕಿಹೊಳಿ ಅವರ ರಾಜಕೀಯ ಧ್ವನಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ. ಇಂತಹ ರಾಜಕೀಯ ದಮನಕ್ಕೆ ಕಾಂಗ್ರೆಸ್ ಎಂದಿಗೂ ಹೆದರುವುದಿಲ್ಲ. ಸತೀಶ್ ಜಾರಕಿಹೊಳಿ ಅವರೊಂದಿಗೆ ನಾವು ಗಟ್ಟಿಯಾಗಿ ನಿಂತಿದ್ದೇವೆ ಎಂದು ತಿಳಿಸಿದ್ದಾರೆ.